ಬೆಳಗಾವಿ: ಖಾನಾಪುರ ತಾಲೂಕಿನ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲನ್ನು ಧರಿಸಿ ತರಗತಿಗೆ ಹಾಜರಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದಲ್ಲಿರುವ ಮಹಾತ್ಮ ಗಾಂಧಿ ಪಿಯು ಕಾಲೇಜಿನಲ್ಲಿ ಸಮವಸ್ತ್ರ ನಿಯಮ ಇಲ್ಲ. ಹೀಗಾಗಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಬ್ ಧರಿಸಿ ತರಗತಿಗಳಿಗೆ ಹಾಜರಾಗಿರುವ ಹಿನ್ನೆಲೆಯಲ್ಲಿ ಕಾಲೇಜಿನ ಕೆಲ ಯುವಕರು ಕೇಸರಿ ಶಾಲನ್ನು ಧರಿಸಿ ಬಂದಿದ್ದಾರೆ. ಇದನ್ನೂ ಓದಿ: ಇವ್ರರನ್ನು ಅರೆಸ್ಟ್ ಮಾಡ್ರಿ – ವಿದ್ಯಾರ್ಥಿನಿಯರ ವಿರುದ್ಧ ಮಡಿಕೇರಿ ಪ್ರಿನ್ಸಿ ಕೆಂಡಾಮಂಡಲ
Advertisement
Advertisement
ಸಮವಸ್ತ್ರ ನಿಗದಿ ಪಡಿಸಿದ ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಕಡ್ಡಾಯ ಪಾಲನೆ ಮಾಡಬೇಕಿದೆ. ಸಮವಸ್ತ್ರ ನಿಗದಿ ಮಾಡದ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಡ್ರೆಸ್ ಕೋಡ್ ಇಲ್ಲ. ಹೀಗಾಗಿ ವಿದ್ಯಾರ್ಥಿಗಳು ಕೇಸರಿ ಶಾಲು ಮತ್ತು ಹಿಜಬ್ ಧರಿಸಿ ಕಾಲೇಜಿಗೆ ಹಾಜರಾಗಿದ್ದಾರೆ. ಇದನ್ನೂ ಓದಿ: ಹಿಜಬ್ ಪ್ರತಿಭಟನೆ – ಕಾಲೇಜು ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್ ದಾಖಲು
Advertisement
ಈ ಸಂದರ್ಭದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ ಸ್ಥಳಕ್ಕೆ ನಂದಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
Advertisement
ಕಾಲೇಜಿನಲ್ಲಿ ಹಿಜಬ್ ವರ್ಸಸ್ ಕೇಸರಿ ಶಾಲು ಹಿನ್ನೆಲೆ ಆಡಳಿತ ಮಂಡಳಿ ನೇತೃತ್ವದಲ್ಲಿ ಎರಡು ಸಮುದಾಯದ ಮುಖಂಡರನ್ನು ಕರೆಸಿ ಸಭೆ ಮಾಡಲಾಗುತ್ತಿದೆ. ಕೇಸರಿ ಶಾಲು ಹಾಕಿಕೊಂಡು ಬಂದಿದ್ದ ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಲಾಗಿದೆ.