ನವದೆಹಲಿ: ಶಾಲೆ, ಕಾಲೇಜುಗಳ ತರಗತಿಯಲ್ಲಿ ಹಿಜಬ್ ನಿಷೇಧಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಎಲ್ಲಾ ಅರ್ಜಿಗಳನ್ನು ಮುಂದಿನ ವಾರ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹೇಳಿದ್ದಾರೆ.
Advertisement
ಇಂದು ಕಲಾಪ ಆರಂಭದಲ್ಲಿ ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್, ವಿಚಾರಣೆ ವಿಳಂಬವಾಗುತ್ತಿರುವುದನ್ನು ಪ್ರಸ್ತಾಪಿಸಿದರು. ಹೆಣ್ಣು ಮಕ್ಕಳು ಶಿಕ್ಷಣವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮುಂದಿನ ವಾರ ಸೂಕ್ತ ಪೀಠದಲ್ಲಿ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸಲ್ಮಾನ್ ಖಾನ್ ಕೊಲ್ಲದೇ ಬಿಡುವುದಿಲ್ಲ: ಮತ್ತೆ ಲಾರೆನ್ಸ್ ಟೀಮ್ ನಿಂದ ಬೆದರಿಕೆ
Advertisement
Advertisement
ಮಾರ್ಚ್‍ನಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿತ್ತು. ಮೂರ್ನಾಲ್ಕು ಬಾರಿ ತುರ್ತು ವಿಚಾರಣೆಗೆ ಮನವಿ ಮಾಡಿದರು. ಕೋರ್ಟ್ ವಿಚಾರಣೆಗೆ ನಿರಾಕರಿಸಿತ್ತು. ಸುಪ್ರೀಂಕೋರ್ಟ್ ಬೇಸಿಗೆ ರಜೆ ಹಿನ್ನೆಲೆ ಅರ್ಜಿ ವಿಚಾರಣೆ ಮತ್ತಷ್ಟು ವಿಳಂಬವಾಗಿತ್ತು. ಇದನ್ನೂ ಓದಿ: ಜ್ಯೋತಿಷಿ ಕೈಕಾಲು ಕಟ್ಟಿ ಚಿನ್ನಾಭರಣ ದೋಚಿದ ಪ್ರಕರಣ- ಪ್ರಮೋದ್ ಪಿಎ ಸೇರಿದಂತೆ ನಾಲ್ವರ ಬಂಧನ
Advertisement
ಶಾಲೆ ಕಾಲೇಜುಗಳಲ್ಲಿ ಹಿಜಬ್ ಧರಿಸುವಂತಿಲ್ಲ ಎಂದು ಈ ಹಿಂದೆ ರಾಜ್ಯ ಸರ್ಕಾರ ಆದೇಶ ಮಾಡಿತ್ತು. ಈ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿತ್ತು. ಹಿಜಬ್ ಇಸ್ಲಾಂ ಧರ್ಮದ ಅಗತ್ಯ ಆಚರಣೆಗಳ ಭಾಗವಲ್ಲ ಎಂದು ಹೇಳಿತ್ತು. ಈ ಆದೇಶವನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸೇರಿದಂತೆ ಹಲವು ಮಂದಿ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.