ಚೆನ್ನೈ: ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪಿಗೆ ತಮಿಳುನಾಡು ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪನ್ನು ತಮಿಳುನಾಡಿನ ಚೆನ್ನೈನಲ್ಲಿ ಕಾಲೇಜು ವಿದ್ಯಾರ್ಥಿಗಳು ವಿರೋಧಿಸಿದ್ದಾರೆ. ಇದನ್ನೂ ಓದಿ: ಸಣ್ಣ ಬಟ್ಟೆ ಹಿಡಿದು ಬೇಧ ಭಾವ ಮೂಡಿಸುವವರೇ ನಮ್ದು ಜಾತ್ಯಾತೀತ ರಾಷ್ಟ್ರ ಅಂತಿದ್ದಾರೆ: ಮುಸ್ಲಿಮ್ ಮಹಿಳೆಯರು
Advertisement
Advertisement
ಸಾಂಸ್ಕೃತಿಕ ನರಮೇಧದ ವಿರುದ್ಧ ನಮ್ಮ ಹೋರಾಟ, ಹಿಜಬ್‌ಗೆ ನಮ್ಮ ಬೆಂಬಲ ಎಂಬ ಘೋಷಣೆಗಳಿರುವ ಅನೇಕ ಫಲಕಗಳನ್ನು ಹಿಡಿದು ನೂರಾರು ಸಂಖ್ಯೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
Advertisement
Tamil Nadu | Students of The New College in Chennai protest against the Karnataka High Court's verdict over #HijabRow pic.twitter.com/ZzZTj8eH39
— ANI (@ANI) March 16, 2022
Advertisement
ತರಗತಿಗಳಲ್ಲಿ ಹಿಜಬ್ ನಿಷೇಧವನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿತು. ಹಿಜಬ್ ಧರಿಸುವುದು ಇಸ್ಲಾಂ ಧರ್ಮದ ಅಗತ್ಯ ಆಚರಣೆಯಲ್ಲ. ಹೀಗಾಗಿ ಹಿಜಬ್ ಧರಿಸಿ ತರಗತಿಗಳಿಗೆ ಬರುವಂತಿಲ್ಲ ಎಂದು ಕೋರ್ಟ್ ತೀರ್ಪಿನಲ್ಲಿ ಸ್ಪಷ್ಟಪಡಿಸಿತು. ಇದನ್ನೂ ಓದಿ: ಹಿಜಬ್ ತೀರ್ಪು ವಿರೋಧಿಸಿ ಅವಾಚ್ಯ ಶಬ್ದಗಳಿಂದ ಕಮೆಂಟ್ ಮಾಡಿದ್ದ ಯುವಕ ಪೊಲೀಸ್ ವಶಕ್ಕೆ
ಕರ್ನಾಟಕ ಹೈಕೋರ್ಟ್ ತೀರ್ಪಿನ ಕುರಿತು ಪರ-ವಿರೋಧದ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ. ಕೋರ್ಟ್ ತೀರ್ಪು ಪ್ರಶ್ನಿಸಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.