ರಾಯಚೂರು: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಿಜಬ್ ವಿವಾದ ಜೋರಾಗುತ್ತಿದೆ. ಈ ನಡುವೆ ಹಿಜಬ್ ಹೆಸರಿನಲ್ಲಿ ಕೇಸರಿ ಹಾಗೂ ನೀಲಿ ಶಾಲು ವಿವಾದ ಶುರುವಾಗಿದೆ.
Advertisement
ಸಿಂಧನೂರು ಪಟ್ಟಣದ ಸರ್ಕಾರಿ ಡಿಗ್ರಿ ಕಾಲೇಜ್‍ನಲ್ಲಿ ಕೇಸರಿ ಹಾಗೂ ನೀಲಿ ಶಾಲು ಧರಿಸಿ ಬಂದಿದ್ದ ವಿದ್ಯಾರ್ಥಿಗಳು ಪರಸ್ಪರ ಘೋಷಣೆಗಳನ್ನು ಕೂಗಿ ಸಂಘರ್ಷ ಆರಂಭವಾಗಿದೆ. ವಿದ್ಯಾರ್ಥಿಗಳ ಗುಂಪು ಜೈ ಶ್ರೀರಾಮ್ ಮತ್ತು ಜೈ ಭೀಮ್ ಎಂದು ಘೋಷಣೆ ಕೂಗಿದ ಬಳಿಕ ವಾಗ್ವಾದ ಆರಂಭವಾಗಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ 20ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ತಾರಕಕ್ಕೇರಿದ ಹಿಜಬ್ ವಿವಾದ – ಶಿಕ್ಷಕರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ
Advertisement
Advertisement
ಇತ್ತ ರಾಯಚೂರು ನಗರದಲ್ಲಿ ಹಿಜಬ್ ಪರ ವಿದ್ಯಾರ್ಥಿನಿಯರು ಧ್ವನಿ ಎತ್ತಿದ್ದು ಕೇಸರಿ, ಬಿಳಿ, ಹಸಿರು ಬಣ್ಣದ ಹಿಜಬ್ ಧರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ ಹಿಜಬ್ ಬೇಕೇ ಬೇಕು, ಇದು ನಮ್ಮ ಮೂಲಭೂತ ಹಕ್ಕು. ಕೇಸರಿ ಶಾಲಿಗೆ ನಮ್ಮ ವಿರೋಧವಿಲ್ಲ ನಮಗೆ ಹಿಜಬ್‍ಗೆ ಅವಕಾಶ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಕಾಲೇಜಿನಲ್ಲಿ ಕೇಸರಿ ಧ್ವಜ ಹಾರಾಟ, ಕಲ್ಲು ತೂರಾಟ – ನಿಷೇಧಾಜ್ಞೆ ಜಾರಿ
Advertisement