ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದ್ದ ಘಟನೆಯ ಹಳೆ ವೀಡಿಯೋಗೆ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಸಂಬಂಧ ಕಲ್ಪಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಕಿಡಿಗೇಡಿಗಳು ಭಾರೀ ಸಂಚಲನ ಸೃಷ್ಟಿಸಿದ್ದಾರೆ.
Advertisement
ಜನವರಿ 31 ರಂದು ಲಿಂಗಸುಗೂರು ಚರ್ಚ್‍ನ ಫಾದರ್ ಮಲ್ಲೇಶಪ್ಪ ಪಾಲ್ ಜಾನ್ ಮುದಗಲ್‍ನ ಮುಸ್ಲಿಂರ ಬಡಾವಣೆಯಲ್ಲಿ ಕುರಾನ್ ಬಗ್ಗೆ ಮಾತನಾಡಿದ್ದಕ್ಕೆ ಅಲ್ಲಿನ ಜನ ಆಕ್ರೋಶಗೊಂಡು ತರಾಟೆಗೆ ತೆಗೆದುಕೊಂಡಿದ್ದರು. ಈ ವೇಳೆ ಸ್ಥಳೀಯ ಎಸ್‍ಡಿಪಿಐ ಕಾರ್ಯಕರ್ತ ಹಿಮದ್ ರಜಾಕ್ ಹಾಗೂ ಪಾಷಾ, ಮಲ್ಲೇಶಪ್ಪ ಪಾಲ್ ಜಾನ್‍ಗೆ ಖಡಕ್ ಎಚ್ಚರಿಕೆ ನೀಡಿದ್ದರು. ಪ್ರಚೋದನಕಾರಿಯಾಗಿ ಮಾತನಾಡಿದ್ದ ಹಿಮದ್ ರಜಾಕ್ ಹಾಗೂ ಪಾಷಾ ವಿರುದ್ಧ ಈಗಾಗಲೇ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಿಜೆಪಿ, ಕಾಂಗ್ರೆಸ್ ಅಮಾಯಕ ಮಕ್ಕಳ ಜೀವನದ ಜೊತೆ ಚೆಲ್ಲಾಟ ಆಡುತ್ತಿವೆ: ಹೆಚ್‍ಡಿಕೆ
Advertisement
Advertisement
ಈ ವೀಡಿಯೋವನ್ನು ತಿರುಚಿರುವ ಕಿಡಿಗೇಡಿಗಳು ಹಿಜಬ್ ವಿಚಾರಕ್ಕೆ ಕಾಲೇಜು ಪ್ರಿನ್ಸಿಪಾಲ್‍ಗೆ ಎಸ್‍ಡಿಪಿಐ ಕಾರ್ಯಕರ್ತರು ಧಮ್ಕಿ ಹಾಕಿ ಜೀವ ಬೆದರಿಕೆ ಹಾಕಿದ್ದಾರೆ ಅಂತ ಬಿಂಬಿಸಿ ವೀಡಿಯೋ ವೈರಲ್ ಮಾಡಿದ್ದಾರೆ. ಇದು ಜಿಲ್ಲೆಯಲ್ಲಿ ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಂಡಿರುವ ಜಿಲ್ಲಾ ಪೊಲೀಸ್ ಅಧಿಕಾರಿಗಳು, ಕಿಡಿಗೇಡಿಗಳು ಹರಿಬಿಟ್ಟ ಪ್ರಚೋದನಾಕಾರಿ ವೀಡಿಯೋ ಬಗ್ಗೆ ಯಾರು ತಲೆಕೆಡಿಸಿಕೊಳ್ಳಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದ ಶಾಂತಿಗೆ ಭಂಗ ತರುವ ಕೆಲಸವಾಗದಿರಲಿ: ಬೊಮ್ಮಾಯಿ
Advertisement