ಚಿಕ್ಕಮಗಳೂರು: ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಕಾಫಿನಾಡು ಚಿಕ್ಕಮಗಳೂರಿನ ಹಲವೆಡೆ ಭೂಕುಸಿತ, ಗುಡ್ಡ ಕುಸಿತಗಳು ಸಂಭವಿಸಿದೆ. ಚಂದ್ರದ್ರೋಣ ಪರ್ವತ ಸಾಲಿನ ಕೆಲ ಪ್ರವಾಸಿ ಸ್ಥಳಗಳಿಗೆ ಜಿಲ್ಲಾಡಳಿತ ಕೆಲವೊಂದು ನಿರ್ಬಂಧ ಹೇರಿದೆ.
1,200 ಕೆ.ಜಿ ಮೇಲ್ಪಟ್ಟ ವಾಹನಗಳಿಗೆ ನಿಷೇಧ ಹೇರಲಾಗಿದೆ. ಬೆಳಗ್ಗೆ 6-9 ಹಾಗೂ ಮಧ್ಯಾಹ್ನ 2-4 ಗಂಟೆ ವರೆಗೆ ಮಾತ್ರವೇ ಪ್ರಯಾಣಕ್ಕೆ ಅವಕಾಶವಿರುತ್ತದೆ. ತಲಾ 150 ವಾಹನಗಳಂತೆ 300 ವಾಹನಗಳಿಗೆ ಮಾತ್ರವೇ ಅವಕಾಶವಿರುತ್ತದೆ. ಇದನ್ನೂ ಓದಿ: ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಬಿದ್ದ ಬೃಹತ್ ಮರ – ಟ್ರಾಫಿಕ್ ಜಾಮ್
Advertisement
Advertisement
ಮುಳ್ಳಯ್ಯನಗಿರಿ, ದತ್ತಪೀಠ, ಝರಿ ಪಾಲ್ಸ್, ಮಾಣಿಕ್ಯಧಾರ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವವರು ಅಧಿಕೃತ ಹೋಂ ಸ್ಟೇ, ರೆಸಾರ್ಟ್ಗಳನ್ನು ಬುಕ್ಕಿಂಗ್ ಮಾಡಿದ್ದರೆ ಮಾತ್ರವೇ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ. ಗಿರಿ ಭಾಗದ ಸ್ಥಳೀಯರಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೆಶ್ ಆದೇಶಿಸಿದ್ದಾರೆ. ಇದನ್ನೂ ಓದಿ: ಕೊಡಗಿನ ಕೊಯಿನಾಡಿನಲ್ಲಿ ಕಣ್ಣೆದುರೇ ಕುಸಿದು ಬಿದ್ದ ಗುಡ್ಡ – ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕಾವೇರಿ
Advertisement
ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಭಾರೀ ಮಳೆಯ ಹಿನ್ನೆಲೆ ಮರ, ಮಣ್ಣು, ಬಂಡೆಗಳು ರಸ್ತೆಗೆ ಉರುಳುತ್ತಿವೆ. ಕೊಳಗಾಮೆ-ಮುತ್ತೋಡಿ ಸಂಪರ್ಕ ಕಲ್ಪಿಸುವ ಗಿರಿ ಭಾಗದ ರಸ್ತೆಯಲ್ಲಿ ಭೂಕುಸಿತವಾಗಿದ್ದು, ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.