ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರು ನಗರ ಹೊರವಲಯದ ಕಣ್ಣೂರಿನಲ್ಲಿ ಗುಡ್ಡ ಕುಸಿತವಾಗಿದೆ.
ಕಣ್ಣೂರಿನ ಬಳ್ಳೂರುಗುಡ್ಡೆಯಲ್ಲಿ ತಡೆಗೋಡೆ ಸಮೇತ ಗುಡ್ಡ ಕುಸಿತವಾಗಿದ್ದು, ಕೆಳಗಿದ್ದ ಮನೆಗಳ ಮೇಲೆ ಬಿದ್ದಿದೆ. ಸದ್ಯ ಮನೆಯಲ್ಲಿ ಯಾರೂ ಇರದಿದ್ದ ಕಾರಣ ಅನಾಹುತ ತಪ್ಪಿದೆ. ಇದನ್ನೂ ಓದಿ: ಮೊಮ್ಮಕ್ಕಳೊಂದಿಗೆ ನೀರಿನಲ್ಲಿ ನಿಂತು ಹಳ್ಳಕ್ಕೆ ಸೇತುವೆ ನಿರ್ಮಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭೂಕುಸಿತವಾಗಿದ್ದು, ಭಾರೀ ಮಳೆಯಿಂದಾಗಿ ಗುಡ್ಡಕುಸಿತ ಸಂಭವಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಇನ್ನೂ 5 ದಿನ ಮಳೆಯ ಅಬ್ಬರ ಜೋರಾಗಿರುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಕೆಆರ್‌ಎಸ್ ಭರ್ತಿಗೆ 5 ಅಡಿ ಮಾತ್ರ ಬಾಕಿ – 3 ದಿನದಲ್ಲಿ ಭರ್ತಿ?
ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗದೆ.