ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಗಾಳಿ-ಮಳೆ (Rain) ಅಬ್ಬರ ಮುಂದುವರೆದಿದೆ. ನಿರಂತರ ಮಳೆಗೆ ಶೃಂಗೇರಿ (Sringeri) ತಾಲೂಕಿನ ಕಡೇಮನೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿದು (Landslide) ಬಿದ್ದಿದೆ.
ಗಾಳಿ-ಮಳೆ ಹೆಚ್ಚಾದಂತೆ ರಸ್ತೆ ಬದಿಯ ಗುಡ್ಡದ ಮಣ್ಣು ಬೀಳುತ್ತಿದೆ. ಈಗಾಗಲೇ ಮರಗಳು ಸಹ ಉರುಳಿದ್ದು, ರಾಷ್ಟ್ರೀಯ ಹೆದ್ದಾರಿ 169ರ ಕಾರ್ಕಳ-ಮಂಗಳೂರು (Mangaluru) – ಶೃಂಗೇರಿ ನಡುವಿನ ಸಂಚಾರಕ್ಕೆ ಅಡಚಣೆಯುಂಟಾಗಿದೆ. ರಸ್ತೆಗೆ ಬಿದ್ದಿರುವ ಭಾರೀ ಪ್ರಮಾಣದ ಮಣ್ಣು ಮತ್ತು ಉರುಳಿ ಬಿದ್ದಿರುವ ಮರಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಭರದಿಂದ ಸಾಗಿದೆ. ಇದನ್ನೂ ಓದಿ: ಭಾರೀ ಮಳೆಗೆ ಧರೆ ಕುಸಿದು ಮನೆಯಂಗಳಕ್ಕೆ ಬಂದ ಮಣ್ಣು – ಡೋರ್ ಜಾಮ್
ಮಳೆ ಮುಂದುವರಿಯುತ್ತಿರುವುದರಿಂದ ಸ್ವಲ್ಪ ಸ್ವಲ್ಪವೇ ಮಣ್ಣು ಜಾರುತ್ತಿದ್ದು, ತೆರವು ಕಾರ್ಯ ಸವಾಲಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಪ್ರಯಾಣಿಸುವ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕಳೆದ ಎರಡು ವರ್ಷಗಳಿಂದ ಈ ಮಾರ್ಗದಲ್ಲಿ ಮಳೆ ಹೆಚ್ಚಾದಂತೆಲ್ಲ ಭೂಮಿಯ ತೇವಾಂಶ ಹೆಚ್ಚಾಗಿ ಧರೆ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿದೆ. ಇದು ಸಾರ್ವಜನಿಕ ವಲಯದಲ್ಲಿ ಆತಂಕ ಹುಟ್ಟಿಸಿದೆ. ಇದನ್ನೂ ಓದಿ: 100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ: ಮುರಿದುಬಿದ್ದ ತಡೆ ಬೇಲಿ, ಮರಗಳು – ಚಾಲಕ, ನಿರ್ವಾಹಕ ಪಾರು

