ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ(Himachal Pradesh) ಸ್ಪಷ್ಟ ಬಹುಮತ ಬರುತ್ತಿದ್ದಂತೆ ಶಾಸಕರನ್ನು ಛತ್ತೀಸ್‌ಗಢಕ್ಕೆ(Chhattisgarh) ಶಿಫ್ಟ್ ಮಾಡಲು ಕಾಂಗ್ರೆಸ್ ಮುಂದಾಗಿದೆ.
ಮಧ್ಯಾಹ್ನ 2 ಗಂಟೆಯ ಟ್ರೆಂಡ್ ಪ್ರಕಾರ ಕಾಂಗ್ರೆಸ್ 40, ಬಿಜೆಪಿ 25, ಇತರರು 3 ಸ್ಥಾನದಲ್ಲಿ ಮುನ್ನಡೆಯಲಿದ್ದಾರೆ.
ಇದನ್ನೂ ಓದಿ: ಗುಜರಾತ್‌ನಲ್ಲಿ ಆಪ್‌ಗೆ ಬಿಜೆಪಿಯಿಂದಲೇ ಫಂಡಿಂಗ್: ಸಿದ್ದರಾಮಯ್ಯ
Advertisement
Advertisement
ಮತ ಎಣಿಕೆಯ ಆರಂಭದಲ್ಲಿ ಕಾಂಗ್ರೆಸ್(Congress) ಮತ್ತು ಬಿಜೆಪಿ(BJP) ಮಧ್ಯೆ ಹಾವು ಏಣಿ ಆಟ ಆರಂಭವಾಗಿತ್ತು. ಮಧ್ಯಾಹ್ನ 12 ಗಂಟೆಯ ನಂತರ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
Advertisement
ಹಿಮಾಚಲ ಪ್ರದೇಶದಲ್ಲಿ ಒಟ್ಟು 68 ಸ್ಥಾನಗಳಿದ್ದು ಬಹುಮತಕ್ಕೆ 35 ಸ್ಥಾನಗಳು ಬೇಕು. ಕಡಿಮೆ ಸಂಖ್ಯೆಯ ಶಾಸಕರು ಇರುವ ಕಾರಣ ಬಿಜೆಪಿ ಆಪರೇಷನ್ ಕಮಲ ನಡೆಸಬಹುದು ಎಂಬ ಭೀತಿಗೆ ತಮ್ಮದೇ ಸರ್ಕಾರ ಇರುವ ಛತ್ತೀಸ್‌ಗಢಕ್ಕೆ ಶಾಸಕರನ್ನು ಶಿಫ್ಟ್ ಮಾಡಲು ಕಾಂಗ್ರೆಸ್ ಮುಂದಾಗಿದೆ ಎಂದು ವರದಿಯಾಗಿದೆ.
Advertisement
ಪ್ರತಿ ಚುನಾವಣೆ ನಡೆದಾಗಲೂ ಹಿಮಾಚಲದಲ್ಲಿ ಸರ್ಕಾರ ಬದಲಾಗುತ್ತಿದೆ. ಹಲವು ಸಮೀಕ್ಷೆಗಳು ಬಿಜೆಪಿಗೆ ಅಲ್ಪ ಬಹುಮತ ಸಿಗಬಹುದು ಎಂದು ಭವಿಷ್ಯ ನುಡಿದಿದ್ದವು.
2017ರ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನ ಗಳಿಸಿದ್ದರೆ ಕಾಂಗ್ರೆಸ್ 21 ಸ್ಥಾನ ಪಡೆದಿತ್ತು.