ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ (Himachal Pradesh Elections) ಆಡಳಿತಾರೂಢ ಬಿಜೆಪಿ (BJP) ವಿರುದ್ಧ ಕಾಂಗ್ರೆಸ್ (Congress) ಜಯಭೇರಿ ಸಾಧಿಸಿದೆ. ಚುನಾವಣೆ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ 40, ಬಿಜೆಪಿ 25 ಹಾಗೂ ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಹಿನ್ನಡೆ ಅನುಭವಿಸಿದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯದ ಮುಖ್ಯಮಂತ್ರಿ ಜೈರಾಮ್ ಠಾಕೂರ್ (Jairam Thakur) ಅವರು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದರು. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದಿದ್ಹೇಗೆ?
Advertisement
Outgoing Himachal Pradesh CM Jairam Thakur tenders his resignation to Governor RV Arlekar. pic.twitter.com/gEjUY6R9z4
— ANI (@ANI) December 8, 2022
Advertisement
ಹಿಮಾಚಲ ಪ್ರದೇಶದಲ್ಲಿ ಪ್ರತಿ ಚುನಾವಣೆಯಲ್ಲಿ ಸರ್ಕಾರ ಬದಲಾಗುತ್ತಿರುತ್ತದೆ. 2017ರಲ್ಲಿ ಬಿಜೆಪಿ 44 ಸ್ಥಾನ ಹಾಗೂ ಕಾಂಗ್ರೆಸ್ 21 ಸ್ಥಾನ ಗಳಿಸಿತ್ತು. ಆದರೆ ಈ ಬಾರಿ ಕಾಂಗ್ರೆಸ್ ಗೆಲುವು ದಾಖಲಿಸಿದೆ. ಆಡಳಿತ ವೈಫಲ್ಯ, ಪಕ್ಷದೊಳಗೆ ಎದ್ದ ಬಂಡಾಯ ಬಿಜೆಪಿ ಸೋಲಿಗೆ ಕಾರಣವಾಗಿದೆ. ಕಾಂಗ್ರೆಸ್ ನೀಡಿದ ಹೊಸ ಭರವಸೆಗಳಿಗೆ ಜನ ಮನಸೋತು ‘ಕೈ’ ಹಿಡಿದಿದ್ದಾರೆ.
Advertisement
Advertisement
ಒಟ್ಟು 68 ವಿಧಾನಸಭಾ ಕ್ಷೇತ್ರಗಳಿದ್ದು, ಸರ್ಕಾರ ರಚನೆಗೆ 35 ಸ್ಥಾನಗಳ ಗೆಲುವು ಅಗತ್ಯ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಆದರೆ ಯಾರ ನಾಯಕತ್ವದಲ್ಲಿ ಸರ್ಕಾರ ರಚಿಸಲಿದೆ ಎಂಬುದು ಕುತೂಹಲ ಮೂಡಿಸಿದೆ. ನಾಯಕರನ್ನು ಆಯ್ಕೆ ಮಾಡುವುದು ಕಾಂಗ್ರೆಸ್‌ಗೆ ಈಗ ಸವಾಲಿನ ಕೆಲಸವಾಗಿದೆ. ಇದನ್ನೂ ಓದಿ: ಹಿಮಾಚಲದಲ್ಲಿ ಕಾಂಗ್ರೆಸ್‌ಗೆ ಅಧಿಕಾರ – ಛತ್ತೀಸ್‌ಗಢಕ್ಕೆ ಶಾಸಕರು ಶಿಫ್ಟ್