LatestLeading NewsMain PostNational

Himachal Pradesh Election Result: ಕಾಂಗ್ರೆಸ್‌ 40, ಬಿಜೆಪಿ 25 ಸ್ಥಾನ ಗೆಲುವು

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ (Himachal Pradesh Elections) ಆಡಳಿತಾರೂಢ ಬಿಜೆಪಿ (BJP) ವಿರುದ್ಧ ಕಾಂಗ್ರೆಸ್‌ (Congress) ಜಯಭೇರಿ ಸಾಧಿಸಿದೆ. ಚುನಾವಣೆ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್‌ 40, ಬಿಜೆಪಿ 25 ಹಾಗೂ ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಹಿನ್ನಡೆ ಅನುಭವಿಸಿದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯದ ಮುಖ್ಯಮಂತ್ರಿ ಜೈರಾಮ್ ಠಾಕೂರ್ (Jairam Thakur) ಅವರು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದರು. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಗೆದ್ದಿದ್ಹೇಗೆ?

ಹಿಮಾಚಲ ಪ್ರದೇಶದಲ್ಲಿ ಪ್ರತಿ ಚುನಾವಣೆಯಲ್ಲಿ ಸರ್ಕಾರ ಬದಲಾಗುತ್ತಿರುತ್ತದೆ. 2017ರಲ್ಲಿ ಬಿಜೆಪಿ 44 ಸ್ಥಾನ ಹಾಗೂ ಕಾಂಗ್ರೆಸ್ 21 ಸ್ಥಾನ ಗಳಿಸಿತ್ತು. ಆದರೆ ಈ ಬಾರಿ ಕಾಂಗ್ರೆಸ್ ಗೆಲುವು ದಾಖಲಿಸಿದೆ. ಆಡಳಿತ ವೈಫಲ್ಯ, ಪಕ್ಷದೊಳಗೆ ಎದ್ದ ಬಂಡಾಯ ಬಿಜೆಪಿ ಸೋಲಿಗೆ ಕಾರಣವಾಗಿದೆ. ಕಾಂಗ್ರೆಸ್ ನೀಡಿದ ಹೊಸ ಭರವಸೆಗಳಿಗೆ ಜನ ಮನಸೋತು ‘ಕೈ’ ಹಿಡಿದಿದ್ದಾರೆ.

ಒಟ್ಟು 68 ವಿಧಾನಸಭಾ ಕ್ಷೇತ್ರಗಳಿದ್ದು, ಸರ್ಕಾರ ರಚನೆಗೆ 35 ಸ್ಥಾನಗಳ ಗೆಲುವು ಅಗತ್ಯ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ 40 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಆದರೆ ಯಾರ ನಾಯಕತ್ವದಲ್ಲಿ ಸರ್ಕಾರ ರಚಿಸಲಿದೆ ಎಂಬುದು ಕುತೂಹಲ ಮೂಡಿಸಿದೆ. ನಾಯಕರನ್ನು ಆಯ್ಕೆ ಮಾಡುವುದು ಕಾಂಗ್ರೆಸ್‌ಗೆ ಈಗ ಸವಾಲಿನ ಕೆಲಸವಾಗಿದೆ. ಇದನ್ನೂ ಓದಿ: ಹಿಮಾಚಲದಲ್ಲಿ ಕಾಂಗ್ರೆಸ್‌ಗೆ ಅಧಿಕಾರ – ಛತ್ತೀಸ್‌ಗಢಕ್ಕೆ ಶಾಸಕರು ಶಿಫ್ಟ್‌

Live Tv

Leave a Reply

Your email address will not be published. Required fields are marked *

Back to top button