ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತದಾನ (Himachal Pradesh Assembly Election) ಇಂದು ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
Advertisement
ಒಟ್ಟು 55 ಲಕ್ಷ ಮತದಾರರು 68 ಕ್ಷೇತ್ರದ 412 ಅಭ್ಯರ್ಥಿಗಳ (Candidates) ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಆಡಳಿತಾರೂಢ ಬಿಜೆಪಿ (BJP), ಕಾಂಗ್ರೆಸ್ (Congress), ಎಎಪಿ (AAP) ಮತ್ತು ಇತರ ಪಕ್ಷಗಳ ಭವಿಷ್ಯ ಇಂದು ಮತಯಂತ್ರಗಳಲ್ಲಿ ಭದ್ರವಾಗಲಿದೆ. ಇಂದು ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ, ಕಾಂಗ್ರೆಸ್, ಎಎಪಿ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಚುನಾವಣಾ ಆಯೋಗದ ಪ್ರಕಾರ, ಒಟ್ಟು 55,92,828 ಮತದಾರರಲ್ಲಿ 27,37,845 ಮಹಿಳೆಯರು, 28,54,945 ಪುರುಷರು ಮತ್ತು 38 ತೃತೀಯಲಿಂಗಿಗಳು, 412 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಈ ಬಾರಿ 24 ಮಹಿಳಾ ಅಭ್ಯರ್ಥಿಗಳಿಳು ಕಣದಲ್ಲಿದ್ದಾರೆ. ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ ಪಿತೂರಿ ಕೇಸ್- ಮಠದ ಅಡುಗೆ ಸಹಾಯಕಿ ಅರೆಸ್ಟ್
Advertisement
Advertisement
ಮತದಾನ ವೇಳೆ ಯಾವುದೇ ಅಹಿತಕರ ಘಟನೆ ನಡೆಯದೆ ಶಾಂತಿಯುತ ಮತದಾನ ನಡೆಸಲು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (CAPF) 67 ಕಂಪನಿಗಳು ಮತ್ತು 11,500 ಕ್ಕೂ ಹೆಚ್ಚು ರಾಜ್ಯ ಪೊಲೀಸ್ ಸಿಬ್ಬಂದಿ ಸೇರಿದಂತೆ ಸುಮಾರು 30,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸುಮಾರು 50 ಸಾವಿರ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ಎಲ್ಲಾ 68 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಸಿಪಿಐಎಂ 11, ಸಿಪಿಐ 1, ಬಿಎಸ್‍ಪಿ 53 ಮತ್ತು ಆರ್‌ಡಿಪಿ 29 ರಲ್ಲಿ ಸ್ಪರ್ಧಿಸುತ್ತಿವೆ. ಇದನ್ನೂ ಓದಿ: ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಆಟೋ ಪಲ್ಟಿ – ಜನರಿಂದ ತಪ್ಪಿಸಿಕೊಳ್ಳಲು ವಿದ್ಯುತ್ ಕಂಬ ಏರಿದ
Advertisement
हिमाचल प्रदेश की सभी विधानसभा सीटों के लिए आज मतदान का दिन है। देवभूमि के समस्त मतदाताओं से मेरा निवेदन है कि वे लोकतंत्र के इस उत्सव में पूरे उत्साह के साथ भाग लें और वोटिंग का नया रिकॉर्ड बनाएं। इस अवसर पर पहली बार वोट देने वाले राज्य के सभी युवाओं को मेरी विशेष शुभकामनाएं।
— Narendra Modi (@narendramodi) November 12, 2022
ಮತದಾನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಹಿಮಾಚಲ ಪ್ರದೇಶದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ತೆರಳಿ ಮತಚಲಾಯಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಪ್ರಜಾಪ್ರಭುತ್ವ ಹಬ್ಬದಲ್ಲಿ ಜನರು ಉತ್ಸಾಹದಿಂದ ಭಾಗವಹಿಸಿ, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿ. ಮೊದಲ ಬಾರಿ ಮತದಾನ ಮಾಡುತ್ತಿರುವ ಮತದಾರರಿಗೆ ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ. ಮೋದಿ 2 ದಿನಗಳ 4 ದಕ್ಷಿಣ ರಾಜ್ಯಗಳ ಪ್ರವಾಸದಲ್ಲಿದ್ದಾರೆ.