ಹಿಮಾಚಲ ಪ್ರದೇಶದಲ್ಲಿ ಬಿಜೆಪಿ, ಕಾಂಗ್ರೆಸ್‌ ಮಧ್ಯೆ ನೆಕ್‌ ಟು ನೆಕ್‌ ಸ್ಪರ್ಧೆ

Advertisements

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ನೆಕ್‌ ಟು ನೆಕ್‌ ಸ್ಪರ್ಧೆ ನಡೆಯುತ್ತಿದೆ.

Advertisements

ಬೆಳಗ್ಗೆ 8:30ರ ಟ್ರೆಂಡ್‌ ಪ್ರಕಾರ ಬಿಜೆಪಿ 23, ಕಾಂಗ್ರೆಸ್‌ 22 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಈ ಬಾರಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ಬಿರುಸಿನ ಸ್ಪರ್ಧೆ ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದವು. ಈ ಸಮೀಕ್ಷೆಯಂತೆ ಎರಡು ಪಕ್ಷಗಳ ಮಧ್ಯೆ ನೆಕ್‌ ಟು ನೆಕ್‌ ಸ್ಪರ್ಧೆ ನಡೆಯುತ್ತಿದೆ.

ಪ್ರತಿ ಬಾರಿ ಹಿಮಾಚಲದಲ್ಲಿ ಸರ್ಕಾರ ಬದಲಾಗುತ್ತಿದೆ. ಆದರೆ ಈ ಬಾರಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಏರಿದರೆ 1990ರ ನಂತರ ಸತತ ಎರಡನೇ ಬಾರಿ ಅಧಿಕಾರಕ್ಕೆ ಏರಿದ ಪಕ್ಷ ಎಂದು ಇತಿಹಾಸ ಬರೆಯಲಿದೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

Advertisements

ಹಲವು ಸಮೀಕ್ಷೆಗಳು ಬಿಜೆಪಿಗೆ ಅಲ್ಪ ಬಹುಮತ ಸಿಗಬಹುದು ಎಂದು ಭವಿಷ್ಯ ನುಡಿದಿವೆ. ಆದರೆ ಇಂಡಿಯಾ ಟುಡೇ ಸಮೀಕ್ಷೆ ಕಾಂಗ್ರೆಸ್‌ಗೆ ಬಹುಮತ ಸಿಗಲಿದೆ ಎಂದು ಹೇಳಿದೆ.

ಹಿಮಾಚಲ ಪ್ರದೇಶದಲ್ಲಿ ಒಟ್ಟು 68 ಸ್ಥಾನಗಳಿದ್ದು, ಸರಳ ಬಹುಮತಕ್ಕೆ 35 ಸ್ಥಾನಗಳ ಅಗತ್ಯವಿದೆ.

Live Tv

Advertisements
Exit mobile version