ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ (Himachal Pradesh Election) ದಿನಾಂಕ ನಿಗದಿಯಾಗಿದ್ದು ಕಾಂಗ್ರೆಸ್ (Congress), ಬಿಜೆಪಿ (BJP) ಸೇರಿ ಎಲ್ಲ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಈ ನಡುವೆ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ (Rahul Gandhi) ತೊಡಗಿರುವ ಹಿನ್ನೆಲೆ ಕಾಂಗ್ರೆಸ್‍ನಿಂದ ಸ್ಟಾರ್ ಪ್ರಚಾರಕರು ಯಾರು ಎನ್ನುವ ಪ್ರಶ್ನೆ ಕೇಳಿ ಬಂದಿತ್ತು. ಇದಕ್ಕೆ ಉತ್ತರ ಸಿಕ್ಕಿದ್ದು ಹಿಮಾಚಲ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ (Priyanka Gandhi) ಅತಿ ಹೆಚ್ಚು ರ‍್ಯಾಲಿ (Rallie) ನಡೆಸುವ ಸಾಧ್ಯತೆಗಳಿದೆ.
Advertisement
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನವೆಂಬರ್ 10 ರವರೆಗೆ ಹಿಮಾಚಲ ಪ್ರದೇಶದ ಮಂಡಿ, ಕುಲು, ಕಂಗ್ರಾ, ಚಂಬಾ ಹಮೀರ್‌ಪುರ್, ಉನಾ, ಶಿಮ್ಲಾ ಮತ್ತು ಸಿರ್ಮೌರ್‌ನಲ್ಲಿ ಎಂಟು ರ‍್ಯಾಲಿಗಳು ಮತ್ತು ರೋಡ್‍ಶೋಗಳನ್ನು (Road shows) ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ
Advertisement
Advertisement
ನವೆಂಬರ್ 3 ರಂದು ಕಾಂಗ್ರಾ ಮತ್ತು ಚಂಬಾ ಮತ್ತು ನವೆಂಬರ್ 7 ರಂದು ಹಮೀರ್‌ಪುರ್ ಮತ್ತು ಉನಾಗೆ ಭೇಟಿ ನೀಡಲಿದ್ದಾರೆ. ಇದಕ್ಕೂ ಮೊದಲು ಅವರು ಅಕ್ಟೋಬರ್ 31 ರಂದು ಮಂಡಿ ಮತ್ತು ಕುಲಗಳಲ್ಲಿ ರ‍್ಯಾಲಿ ನಡೆಸಲಿದ್ದಾರೆ. ನವೆಂಬರ್ 10 ರಂದು ಶಿಮ್ಲಾ ಮತ್ತು ಸಿರ್ಮೌರ್‌ನಲ್ಲಿ ರ‍್ಯಾಲಿಗಳು ಮತ್ತು ರೋಡ್‍ಶೋಗಳನ್ನು ನಡೆಸಲಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಸರ್ವರಿಗೂ ಸೌಹಾರ್ದತೆ, ಸಾಮರಸ್ಯ ಅತ್ಯಗತ್ಯ: ಯು.ಟಿ ಖಾದರ್
Advertisement
ನವೆಂಬರ್ 12 ರಂದು ಹಿಮಾಚಲ ಪ್ರದೇಶದಲ್ಲಿ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ. ಡಿಸೆಂಬರ್ 8 ರಂದು ರಾಜ್ಯದಲ್ಲಿ ಮತ ಎಣಿಕೆ ನಡೆಯಲಿದೆ. ಭಾರತೀಯ ಜನತಾ ಪಕ್ಷ ಅಧಿಕಾರವನ್ನು ಉಳಿಸಿಕೊಳ್ಳಲು ಹವಣಿಸುತ್ತಿದೆ.