ಶಿಮ್ಲಾ: ಹಿಮಾಚಲ ಪ್ರದೇಶ (Himachal Pradesh) ವಿಧಾನಸಭೆ ಚುನಾವಣೆಗೆ (Assembly Election) ದಿನಾಂಕ ಘೋಷಣೆ ಬೆನ್ನಲ್ಲೇ ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಪಟ್ಟಿಯ (Candidates) ಪ್ರಕಾರ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ (Jairam Thakur) ಸೆರಾಜ್ (Seraj) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
Advertisement
ಅಭ್ಯರ್ಥಿಗಳ ಪಟ್ಟಿ ಅಂತಿಮ ಮಾಡುವ ಹಿನ್ನೆಲೆ ನಿನ್ನೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆದಿತ್ತು. ಕೇಂದ್ರ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (Amit Shah), ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S Yediyurappa) ಸೇರಿದಂತೆ ಕೇಂದ್ರ ಚುನಾವಣಾ ಸಮಿತಿ ಸದಸ್ಯರು ಭಾಗಿಯಾಗಿದ್ದರು. ಈ ಸಭೆಯ ಬಳಿಕ 62 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಇದನ್ನೂ ಓದಿ: ಮಹಿಳೆಯ ಬೆತ್ತಲೆ ದೇಹ ಸೂಟ್‍ಕೇಸ್‍ನಲ್ಲಿ ಪತ್ತೆ – ರೇಪ್ ಶಂಕೆ
Advertisement
Advertisement
ಇತ್ತ ಕಾಂಗ್ರೆಸ್ (Congress) ಕೂಡಾ ಟಿಕೆಟ್ ಹಂಚಿಕೆಯಲ್ಲಿ ಹಿಂದೆ ಬಿದ್ದಿಲ್ಲ, ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್ ಕೂಡಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮೊದಲ ಪಟ್ಟಿಯಲ್ಲಿ 46 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಬ ಉನಾ ಜಿಲ್ಲೆಯ ಹರೋಲಿಯಿಂದ ತನ್ನ ಶಾಸಕಾಂಗ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿಯನ್ನು ಕಣಕ್ಕಿಳಿಸಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ನ.12ಕ್ಕೆ ಚುನಾವಣೆ, ಡಿ. 8ಕ್ಕೆ ಮತ ಎಣಿಕೆ
Advertisement
ಮಾಜಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಸುಖ್ವಿಂದರ್ ಸಿಂಗ್ ಸುಖು ಮತ್ತು ಕುಲದೀಪ್ ಸಿಂಗ್ ರಾಥೋಡ್ ಕ್ರಮವಾಗಿ ನಾದೌನ್ ಮತ್ತು ಥಿಯೋಗ್ ಕ್ಷೇತ್ರದಿಂದ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಮಾಜಿ ಸಚಿವೆ ಮತ್ತು ಮಾಜಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿ ಆಶಾ ಕುಮಾರಿ ಅವರ ಡಾಲ್ಹೌಸಿ ಸ್ಥಾನದಿಂದ ಕಣಕ್ಕಿಳಿದಿದ್ದಾರೆ.
ಕಳೆದ ವಾರ, ಭಾರತೀಯ ಚುನಾವಣಾ ಆಯೋಗವು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿತು. ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ಅಕ್ಟೋಬರ್ 17 ರಂದು ಪ್ರಾರಂಭವಾಗಿ ಅಕ್ಟೋಬರ್ 25 ರವರೆಗೆ ಮುಂದುವರಿಯುತ್ತದೆ, ಅಕ್ಟೋಬರ್ 29 ರವರೆಗೆ ಹಿಂಪಡೆಯಲು ಅವಕಾಶವಿದೆ.
2017ರ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳನ್ನು ಗೆದ್ದು, ಕಾಂಗ್ರೆಸ್ ಪಕ್ಷವನ್ನು 21 ಸ್ಥಾನಗಳಿಗೆ ಸೀಮಿತಗೊಳಿಸಿತು. ಪ್ರಸ್ತುತ, ಹಿಮಾಚಲ ಪ್ರದೇಶ ವಿಧಾನಸಭೆಯು 45 ಬಿಜೆಪಿ ಶಾಸಕರನ್ನು ಹೊಂದಿದ್ದರೆ, ಕಾಂಗ್ರೆಸ್ 22 ಮತ್ತು ಸಿಪಿಐ(ಎಂ) ಒಬ್ಬ ಶಾಸಕರನ್ನು ಹೊಂದಿದೆ.