ಶಿಮ್ಲಾ: ಭಾರೀ ಹಣಕಾಸು ಮುಗ್ಗಟ್ಟು (Economic Crisis) ಎದುರಿಸುತ್ತಿರುವ ಹಿಮಾಚಲ ಪ್ರದೇಶದಲ್ಲಿರುವ (Himachal Pradesh) ಕಾಂಗ್ರೆಸ್ ಸರ್ಕಾರ ಆದಾಯ ಪಾವತಿಸುವ ವ್ಯಕ್ತಿಗಳಿಗೆ ಉಚಿತ ವಿದ್ಯುತ್ (Free Electricity) ನೀಡದೇ ಇರುವ ಅಚ್ಚರಿಯ ನಿರ್ಧಾರ ಕೈಗೊಂಡಿದೆ.
ಸಿಎಂ ಸುಖುವಿಂದರ್ ಸಿಂಗ್ ಸುಕ್ಕು (Sukhvinder Singh Sukhu) ನೇತೃತ್ವದಲ್ಲಿ ಶುಕ್ರವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಎಲ್ಲಾ ಆದಾಯ ತೆರಿಗೆ ಪಾವತಿದಾರರಿಗೆ ಅನುಕೂಲವಾಗುವ ಉಚಿತ ವಿದ್ಯುತ್ ಯೋಜನೆಯನ್ನು ಹಿಂಪಡೆಯಲು ನಿರ್ಧರಿಸಿದೆ. ಬಿಪಿಎಲ್ ಕಾರ್ಡ್ (BPL Card) ಮತ್ತು ನಗರ ಪ್ರದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ (IRDP) ಮಾಸಿಕ 125 ಯೂನಿಟ್ ಉಚಿತ ವಿದ್ಯುತ್ ಮುಂದುವರಿಯಲಿದೆ. ಇದನ್ನೂ ಓದಿ: ದೆಹಲಿಯಂತೆ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ
Advertisement
Advertisement
ವಿದ್ಯುತ್ ಸಬ್ಸಿಡಿಗೆ ಹಲವು ಷರತ್ತುಗಳನ್ನು ಈಗ ಹಾಕಲಾಗಿದೆ. ಒಂದು ಕುಟುಂಬದ ಒಂದು ಮೀಟರ್‌ಗೆ ಮಾತ್ರ ಇನ್ನು ಮುಂದೆ ಸಬ್ಸಿಡಿ ಸಿಗಲಿದೆ. ಉಚಿತ ವಿದ್ಯುತ್ ಪಡೆಯುವಸಂಪರ್ಕಕ್ಕೆ ಆಧಾರ್ ನಂಬರ್ ಜೊತೆಗೆ ಪಡಿತರ ಸಂಖ್ಯೆಯನ್ನು ಲಿಂಕ್ ಮಾಡಲಾಗುತ್ತದೆ.
Advertisement
ರಾಜ್ಯದಲ್ಲಿ 26 ಲಕ್ಷ ವಿದ್ಯುತ್ ಗ್ರಾಹಕರಿದ್ದು ಅವರಲ್ಲಿ 12 ಲಕ್ಷ ಜನರು 125 ಯೂನಿಟ್‌ಗಿಂತ ಕಡಿಮೆ ವಿದ್ಯುತ್ ಬಳಸುವ ಮೂಲಕ ಶೂನ್ಯ ವಿದ್ಯುತ್ ಬಿಲ್ ಪ್ರಯೋಜನ ಪಡೆಯುತ್ತಿದ್ದಾರೆ.
Advertisement
ರಾಜ್ಯದ ಒಟ್ಟು ಸಾಲ 85,000 ಕೋಟಿ ರೂ. ದಾಟಿದ್ದು ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ. ಹಿಮಾಚಲ ಪ್ರದೇಶದ ರಾಜ್ಯ ವಿದ್ಯುತ್ ಮಂಡಳಿ 2023-24 ಹಣಕಾಸು ವರ್ಷದಲ್ಲಿ 1,800 ಕೋಟಿ ರೂ. ನಷ್ಟ ಅನುಭವಿಸಿದೆ. ಇದನ್ನೂ ಓದಿ: ಗ್ಯಾರಂಟಿಗಳ ಭಾರದಿಂದ ಕಂಗೆಟ್ಟ ಸರ್ಕಾರ -ಆಪರೇಷನ್ ಬಿಪಿಎಲ್ ಕಾರ್ಡ್‌ಗೆ ಪ್ಲಾನ್!
ವಿಧಾನಸಭಾ ಚುನಾವಣೆಯ ಸಮಯದಲ್ಲಿ ಹಿಮಾಚಲ ಪ್ರದೇಶ ಕಾಂಗ್ರೆಸ್ ಎಲ್ಲರಿಗೂ 125 ಯೂನಿಟ್ ಉಚಿತ ವಿದ್ಯುತ್, ಹಳೆಯ ಪಿಂಚಣಿ ವ್ಯವಸ್ಥೆ ಸೇರಿದಂತೆ ಹಲವು ಭರವಸೆಗಳನ್ನು ಪ್ರಕಟಿಸಿತ್ತು.