ನವದೆಹಲಿ: ಹಿಮಾಚಲ ಪ್ರದೇಶದ(Himachal Pradesh) ಚುನಾವಣಾ ದಿನಾಂಕ ಪ್ರಕಟವಾಗಿದೆ. ನವೆಂಬರ್ 12 ರಂದು ಚುನಾವಣೆ(Election) ನಡೆದರೆ ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.
ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯಕ್ತ ರವಿಕುಮಾರ್ ಸುದ್ದಿಗೋಷ್ಠಿ ನಡೆಸಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.
Advertisement
Advertisement
ಚುನಾವಣೆ ನಡೆದ ಬಳಿಕ ಮತ ಎಣಿಕೆಗೆ ಇಷ್ಟೊಂದು ಅಂತರ ಯಾಕೆ ಎಂದು ಕೇಳಿದ್ದಕ್ಕೆ ಅಲ್ಲಿನ ಹವಾಮಾನ ಪರಿಸ್ಥಿತಿಯನ್ನು ಪರಿಗಣಿಸಿ ಚುನಾವಣೆ ದಿನಾಂಕ ನಿಗದಿ ಮಾಡಲಾಗಿದೆ. ಸಮಸ್ಯೆಯಾದಲ್ಲಿ ಬೇರೆ ದಿನ ಚುನಾವಣೆ ಮಾಡಲಾಗುತ್ತದೆ ಎಂದು ಉತ್ತರಿಸಿದರು. ಇದನ್ನೂ ಓದಿ: ನವೆಂಬರ್‌ನಲ್ಲಿ ಕರ್ನಾಟಕಕ್ಕೂ ಬರಲಿದೆ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲು
Advertisement
ಹಿಮಾಚಲ ಪ್ರದೇಶದ ವಿಧಾನಸಭೆಯ ಅವಧಿ 2023ರ ಜನವರಿ 8ರಂದು ಅಂತ್ಯಗೊಳ್ಳಲಿದೆ. ಹಿಮಾಚಲ ಪ್ರದೇಶ ವಿಧಾನಸಭೆ 68 ಸದಸ್ಯ ಬಲ ಹೊಂದಿದ್ದು, ಬಹುಮತಕ್ಕೆ 35 ಸ್ಥಾನದ ಅಗತ್ಯವಿದೆ.
Advertisement
ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 44 ಸ್ಥಾನಗಳಲ್ಲಿ ಗೆಲುವು ಗಳಿಸಿ ಅಧಿಕಾರ ಹಿಡಿದಿತ್ತು. ಕಾಂಗ್ರೆಸ್ 21 ಸ್ಥಾನವನ್ನು ಗೆದ್ದುಕೊಂಡಿತ್ತು.