ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ (Teacher) 9ನೇ ತರಗತಿಯ ವಿದ್ಯಾರ್ಥಿನಿಗೆ ಅಶ್ಲೀಲ ವೀಡಿಯೋ ತೋರಿಸಿ ಆಕೆಯ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಧಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯ ರಾಜಧಾನಿ ಶಿಮ್ಲಾದಿಂದ (Shimla) ಸುಮಾರು 20 ಕಿಮೀ ದೂರದಲ್ಲಿರುವ ಜುಂಗಾ ಎಂಬಲ್ಲಿ ಈ ಕೃತ್ಯ ನಡೆದಿದೆ. ಸರ್ಕಾರಿ ಪ್ರೌಢಶಾಲೆಯ ಡ್ರಾಯಿಂಗ್ ಶಿಕ್ಷಕ, ಮೇ 2 ರಂದು ಶಾಲೆಯಲ್ಲಿ ಬಲವಂತವಾಗಿ ವಿದ್ಯಾರ್ಥಿನಿಗೆ ಅಶ್ಲೀಲ ವೀಡಿಯೋ ತೋರಿಸಿದ್ದಾನೆ. ಅಲ್ಲದೇ ಅನುಚಿತವಾಗಿ ವಿದ್ಯಾರ್ಥಿನಿಯನ್ನು ಸ್ಪರ್ಶಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಬಿಗ್ ಬಾಸ್ ವಿನ್ನರ್ ವಿರುದ್ಧ ED ಕೇಸ್ ದಾಖಲು
ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ ಅಡಿಯಲ್ಲಿ ಮಾನಭಂಗಕ್ಕೆ ಯತ್ನ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸೆಕ್ಷನ್ 10 ಮತ್ತು 12ರ ಅಡಿಯಲ್ಲಿ ಲೈಂಗಿಕ ಕಿರುಕುಳ ಮತ್ತು ಹಲ್ಲೆಯ ಯತ್ನದ ಪ್ರಕರಣ ದಾಖಲಾಗಿದೆ.
ಆರೋಪಿಯ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ನಿವಾಸಕ್ಕೆ ಎಸ್ಐಟಿ ತಂಡ – ಸಂತ್ರಸ್ತೆ ಸಮ್ಮುಖದಲ್ಲಿ ಸ್ಥಳ ಮಹಜರು