ಮೊಹಾಲಿ: ಇಲ್ಲಿನ ಸೊಹಾನಾ ಗ್ರಾಮದಲ್ಲಿ ಬಹುಮಹಡಿ ಕಟ್ಟಡ ಕುಸಿದು (Mohali Building Collapse) ಬಿದ್ದಿದ್ದು, ವಿವಾಹಿತ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಥಿಯೋಗ್ ಪ್ರದೇಶದ ದೃಷ್ಟಿ ವರ್ಮಾ (20) ಮೃತ ಮಹಿಳೆ, ಈಕೆ ಮೂಲತಃ ಹಿಮಾಚಲ ಪ್ರದೇಶದವರು. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಅವರನ್ನು ರಕ್ಷಿಸಿ ಸೊಹಾನಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
ನಿನ್ನೆ (ಶನಿವಾರ) ಸಂಜೆ ವೇಳೆಗೆ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳಡಿ ಕನಿಷ್ಠ ಐವರು ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಇದನ್ನೂ ಓದಿ: ಸಿ.ಟಿ ರವಿ ಹರಕು ಬಾಯಿ ಮನುಷ್ಯ – ಪ್ರಿಯಾಂಕ್ ಖರ್ಗೆ ಸಿಡಿಮಿಡಿ
Advertisement
ಕಟ್ಟಡದ ಮಾಲೀಕರಾದ ಪರ್ವಿಂದರ್ ಸಿಂಗ್ ಮತ್ತು ಗಗನ್‌ದೀಪ್ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 105ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೊಹಾಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಪರೀಕ್ ತಿಳಿಸಿದ್ದಾರೆ. ಇದನ್ನೂ ಓದಿ: ನಾಯಿಗಳ ಕಾದಾಟದ ಮೇಲೆ ಬೆಟ್ಟಿಂಗ್ – 81 ಮಂದಿ ಅರೆಸ್ಟ್, 19 ವಿದೇಶಿ ತಳಿ ಶ್ವಾನಗಳು ವಶಕ್ಕೆ
Advertisement
Advertisement
ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ದೂರವಾಣಿ ಕರೆ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರಲ್ಲದೇ, ಪರಿಸ್ಥಿತಿ ಅವಲೋಕಿಸಿದ್ದಾರೆ. ದುರಂತ ನೆನೆದು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು – ಗಂಗಾವತಿ ಆಸ್ಪತ್ರೆಗೆ ಮುಗಿಬಿದ್ದ ಮಹಿಳೆಯರು