ಚಂಡೀಗಢ: ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ (Himani Narwal) ಹತ್ಯೆ ಪ್ರಕರಣದಲ್ಲಿ ಹೊಸ ಬೆಳವಣಿಗೆ ನಡೆದಿದೆ. ಆರೋಪಿ ಸಚಿನ್‌ನ್ನು ಬಂಧಿಸಿದ ಒಂದು ದಿನದ ಬಳಿಕ, ಆತ ಸೂಟ್‌ಕೇಸ್‌ನಲ್ಲಿ ಶವ ಸಾಗಿಸುತ್ತಿದ್ದ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ.
ರೋಹ್ಟಕ್ (Rohtak) ಜಿಲ್ಲೆಯ ಸಂಪ್ಲಾ ಬಸ್ ನಿಲ್ದಾಣದ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಹಿಮಾನಿ ಶವ ಪತ್ತೆಯಾಗಿತ್ತು. ಆರೋಪಿಯು, ದುಪ್ಪಟ್ಟಾದಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಬಳಿಕ ಆಕೆಯ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಬಸ್ ನಿಲ್ದಾಣದಲ್ಲಿ ಇಟ್ಟುಹೋಗಿದ್ದಾನೆ ಎಂದು ಹರಿಯಾಣ ಪೊಲೀಸರು (Haryana Police) ತಿಳಿಸಿದ್ದರು. ಇದನ್ನೂ ಓದಿ: ವಿಜಯಪುರ ಕಾನ್ಸ್‌ಟೇಬಲ್ ಭಾವುಕ ಪೋಸ್ಟ್ – ಆತನಿಂದ ರಜೆಗೆ ಯಾವ್ದೇ ಮನವಿ ಬಂದಿಲ್ಲ: ಎಸ್ಪಿ ಸ್ಪಷ್ಟನೆ
Advertisement
Advertisement
ಇದೀಗ ಪೊಲೀಸರಿಗೆ ಲಭ್ಯವಾದ ಸಿಸಿಟಿವಿ ದೃಶ್ಯದಲ್ಲಿ ಆರೋಪಿಯು ಹಿಮಾನಿ ಮನೆ ಸಮೀಪದ ರಸ್ತೆಯಲ್ಲಿ ಸೂಟ್‌ಕೇಸ್ ಹಿಡಿದುಕೊಂಡು ಹೋಗುತ್ತಿರುವ ಸೆರೆಯಾಗಿದೆ. ಸಿಸಿಟಿವಿ ಫೂಟೇಜ್ ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಕೊಲೆ ಕೇಸ್‌ನಲ್ಲಿ ಆಪ್ತನ ಬಂಧನ – ಮಹಾರಾಷ್ಟ್ರ ಸಚಿವ ರಾಜೀನಾಮೆ
Advertisement
ಆರೋಪಿ ಸಚಿನ್, ಮೃತ ಹಿಮಾನಿಯ ಸ್ನೇಹಿತನಾಗಿದ್ದ. ಹಣಕ್ಕಾಗಿ ವಿಚಾರಕ್ಕೆ ನಡೆದ ಜಗಳದಲ್ಲಿ ಆಕೆಯನ್ನು ಕತ್ತು ಹಿಸುಕಿ ಕೊಂದ ಆರೋಪದಡಿ ಸಚಿನ್‌ನನ್ನು ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ.
Advertisement
ಏನಿದು ಕೇಸ್?
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ `ಭಾರತ್ ಜೋಡೋ’ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್(22) ಶವ ಹರಿಯಾಣದ ರೋಹ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಪತ್ತೆಯಾಗಿತ್ತು. ಇದನ್ನೂ ಓದಿ: ಅರಣ್ಯದಲ್ಲಿ ಪಾರ್ಟಿ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಇಲಾಖೆ ಸಿಬ್ಬಂದಿ, ಪೊಲೀಸರ ಮೇಲೆ ಪುಂಡರಿಂದ ಹಲ್ಲೆ
ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್‌ಕೇಸ್‌ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದರು. ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾದಿಂದ ಬಿಗಿಯಲಾಗಿತ್ತು. ಹೀಗಾಗಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದರು. ಇದನ್ನೂ ಓದಿ: ಬಾಯಿ ಸುಡಲಿದೆ ಕಾಫಿ – ತಿಂಗಳಾಂತ್ಯಕ್ಕೆ ಕಪ್ ಕಾಫಿ ಬೆಲೆ 3 ರೂ. ಏರಿಕೆ ಸಾಧ್ಯತೆ