ಹಿಂಡನ್‍ಬರ್ಗ್ ವರದಿ ವಿವಾದ – ತನಿಖೆಗೆ 3 ತಿಂಗಳ ಗಡುವು ನೀಡಿದ ಸುಪ್ರೀಂ

Public TV
2 Min Read
adani group

ನವದೆಹಲಿ: ಅದಾನಿ ಗ್ರೂಪ್ ಆಫ್ ಕಂಪನಿಗಳ (Adani Group) ವಿರುದ್ಧದ ಹಿಂಡೆನ್‍ಬರ್ಗ್ (Hindenburg Research) ಸಂಶೋಧನಾ ವರದಿಯಲ್ಲಿನ ಆರೋಪಗಳ ಬಗ್ಗೆ ನಡೆಸುತ್ತಿರುವ ತನಿಖೆಯನ್ನು ಪೂರ್ಣಗೊಳಿಸಲು ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾಗೆ (Securities and Exchange Board of India) ಮೂರು ತಿಂಗಳ ಕಾಲಾವಕಾಶವನ್ನು ಸುಪ್ರೀಂ (Supreme Court)‌ ವಿಸ್ತರಿಸಿ ಶುಕ್ರವಾರ ಆದೇಶ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (CJI) ಡಿವೈ ಚಂದ್ರಚೂಡ್ (DY Chandrachud), ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ಈ ಆದೇಶವನ್ನು ನೀಡಿದೆ. ಸೆಬಿಯ (SEBI) ಬೇಡಿಕೆಯಂತೆ ಆರು ತಿಂಗಳ ವಿಸ್ತರಣೆಯನ್ನು ನೀಡಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಅದಾನಿ – ಹಿಂಡನ್‌ಬರ್ಗ್‌ : ಸುಪ್ರೀಂಗೆ ತನಿಖಾ ವರದಿ ಸಲ್ಲಿಕೆ

Supreme Court

ತನ್ನ ತನಿಖಾ ವರದಿಯನ್ನು ಸಲ್ಲಿಸಲು ಆರು ತಿಂಗಳ ಕಾಲ ವಿಸ್ತರಣೆ ಕೋರಿ ಸೆಬಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ವಿಚಾರಣೆ ನಡೆಸಿತು. ಈ ವೇಳೆ ಸುಪ್ರೀಂ, ಕೆಲಸದಲ್ಲಿ ಸ್ವಲ್ಪ ಚುರುಕುತನದ ಅಗತ್ಯವಿದೆ. 6 ತಿಂಗಳುಗಳ ಕಾಲವಕಾಶ ನೀಡಲು ಸಾಧ್ಯವಿಲ್ಲ. ಒಂದು ತಂಡವನ್ನು ರಚಿಸಿ ಶೀಘ್ರ ತನಿಖೆ ಮುಗಿಸಿ. ಆಗಸ್ಟ್ ಮಧ್ಯದಲ್ಲಿ ಪ್ರಕರಣವನ್ನು ವಿಚಾರಣೆಗೆ ಎತ್ತಿಕೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ಮೇ 15ರಂದು ಆದೇಶ ಪ್ರಕಟಿಸುವುದಾಗಿ ಹೇಳಿದೆ.

ಮಾ.2ರ ಸುಪ್ರೀಂ ಆದೇಶದಂತೆ ಮೇ 2ಕ್ಕೆ ತನಿಖೆ ಪೂರ್ಣಗೊಳ್ಳಬೇಕಿತ್ತು. ಆದರೆ ಹಿಂಡೆನ್‍ಬರ್ಗ್ ವರದಿಯಲ್ಲಿ ಉಲ್ಲೇಖಿಸಲಾದ 12 ಸಂಶಯಾಸ್ಪದ ವಹಿವಾಟುಗಳಿಗೆ ಕನಿಷ್ಠ 15 ತಿಂಗಳ ತನಿಖೆ ಅಗತ್ಯವಿದೆ. ಆದರೆ ಆರು ತಿಂಗಳು ಅವಕಾಶ ವಿಸ್ತರಿಸಿದರೆ ತನಿಖೆ ಪೂರ್ಣಗೊಳಿಸುವುದಾಗಿ ಕಳೆದ ತಿಂಗಳು ಸೆಬಿ ಸಲ್ಲಿಸಿದ್ದ ಮನವಿಯಲ್ಲಿ ಹೇಳಿತ್ತು.

SEBI

ತನಿಖೆಗೆ ಬಹು ದೇಶೀಯ ಮತ್ತು ಅಂತರರಾಷ್ಟ್ರೀಯ ಬ್ಯಾಂಕ್‍ಗಳಿಂದ ಬ್ಯಾಂಕ್ ಸ್ಟೇಟ್‍ಮೆಂಟ್‍ಗಳನ್ನು ಪಡೆಯುವುದು ಅಗತ್ಯವಾಗಿರುತ್ತದೆ. ಬ್ಯಾಂಕ್ ಸ್ಟೇಟ್‍ಮೆಂಟ್‍ಗಳು 10 ವರ್ಷಗಳ ಹಿಂದೆ ಕೈಗೊಂಡ ವಹಿವಾಟುಗಳಿಗೆ ಸಹ ಸಂಬಂಧಿಸಿದೆ. ಇದು ಸಮಯ ತೆಗೆದುಕೊಳ್ಳುತ್ತದೆ ಎಂದು ಸೆಬಿ ನ್ಯಾಯಾಲಯಕ್ಕೆ ತಿಳಿಸಿತ್ತು.

ಷೇರು ಬೆಲೆಗಳನ್ನು ಕೃತಕವಾಗಿ ಹೆಚ್ಚಿಸುವ ಮೂಲಕ ಅದಾನಿ ಸಮೂಹದಿಂದ ವಂಚನೆಯಾಗಿದೆ ಎಂದು ಆರೋಪಿಸಿ ಹಿಂಡೆನ್‍ಬರ್ಗ್ ರಿಸರ್ಚ್ ವರದಿ ಪ್ರಕಟಿಸಿತ್ತು. ಇದಾದ ಬೆನ್ನಲ್ಲೇ ಅದಾನಿ ಕಂಪನಿಗಳ ಷೇರುಗಳ ಮೌಲ್ಯದಲ್ಲಿ ಭಾರೀ ಕುಸಿತ ಕಂಡಿದ್ದವು.

ಇನ್ನೊಂದೆಡೆ, ಹಿಂಡೆನ್‍ಬರ್ಗ್ ರಿಸರ್ಚ್‍ನ ಸಂಸ್ಥಾಪಕ ನಾಥನ್ ಆಂಡರ್ಸನ್ ಮತ್ತು ಭಾರತದಲ್ಲಿನ ಅದರ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು. ಅವರ ವಿರುದ್ಧ ಎಫ್‍ಐಆರ್ ದಾಖಲಿಸಲು ಸೆಬಿ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ಸುಪ್ರೀಂ ನಿರ್ದೇಶನ ನೀಡಬೇಕು ಎಂದು ಕೋರಿ ವಕೀಲ ಮನೋಹರ್ ಲಾಲ್ ಶರ್ಮಾ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ನಾಯಕ ಡಾ. ಜಯಾ ಠಾಕೂರ್ ಅವರು ಹಿಂಡನ್‍ಬರ್ಗ್ ವರದಿ ಉಲ್ಲೇಖಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಜೀವ ವಿಮಾ ನಿಗಮ (LIC) ಅದಾನಿ ಕಂಪನಿಗಳಲ್ಲಿ ಹೂಡಿಕೆ ಮಾಡಿದ ನಿರ್ಧಾರವನ್ನು ಪ್ರಶ್ನಿಸಿ ತನಿಖೆ ನಡೆಸಬೇಕು ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಹಿಂಡೆನ್‌ಬರ್ಗ್‌ ಸಂಶೋಧನಾ ವರದಿ ಸುಳ್ಳು, ಆಧಾರ ರಹಿತ: ಮಾರಿಷಸ್‌ ಸಂಸತ್ತಿಗೆ ಸರ್ಕಾರ ಉತ್ತರ

Share This Article