ಹಿಂದಿಯ ‘ಶ್ರೀಮದ್ ರಾಮಾಯಣ’ ಈಗ ಕನ್ನಡಕ್ಕೆ ಡಬ್- ಪ್ರಸಾರಕ್ಕೆ ಡೇಟ್ ಫಿಕ್ಸ್

Public TV
1 Min Read
Shrimad Ramayana 2

ಳೆದ ಮೂರೂವರೆ ದಶಕಗಳಿಂದ ತನ್ನದೆ ಸಾಮರ್ಥ್ಯವನ್ನು ಉಳಿಸಿಕೊಂಡು ಬರುತ್ತಿರುವ ಉದಯ ವಾಹಿನಿಯು ಈಗ ‘ಶ್ರೀಮದ್ ರಾಮಾಯಣ’ (Srimad Ramayana) ಧಾರವಾಹಿಯನ್ನು ವೀಕ್ಷಕರಿಗೆ ಉಣಬಡಿಸಲು ಸಿದ್ದತೆ ಮಾಡಿಕೊಂಡಿದೆ. ಅದ್ಬುತ ಕಾವ್ಯವನ್ನು ಹೊಸ ತಲೆಮಾರಿಗೆ ತಲುಪಿಸಲು ಮುಂದಾಗಿದೆ.

Shrimad Ramayanaರಾಮಾಯಣ (Ramayana) ಭಾರತೀಯ ಸಂಸ್ಕೃತಿ ಪರಂಪರೆ ಪ್ರತಿಬಿಂಬಿಸಲಿರುವುದು ವಿಶೇಷ. ರಾಮನ ಜೀವನ ಬಹುತೇಕ ಭಾರತೀಯರಿಗೆ ಮಾದರಿಯಾಗಿದೆ. ಆತನ ರಾಜ್ಯ ಪರಿಪಾಲನೆಯು ಇಂದಿಗೂ ರಾಮರಾಜ್ಯ ಅನ್ನುವ ಪದ ಈಗಲೂ ಬಳಸಲಾಗುತ್ತಿದೆ. ರಾಮ ಮತ್ತು ಸೀತೆಯ ಪವಿತ್ರ ಪ್ರೇಮ, ಕಥೆಯಲ್ಲಿ ಧರ್ಮದ ಪಾಲನೆಯ ಮಾರ್ಗದಲ್ಲಿ ಎದುರಿಸಿದ ಅನೇಕ ಸವಾಲುಗಳು ಕುತೂಹಲಕಾರಿಯಾಗಿದೆ. ಸಂಪೂರ್ಣ ನೂತನ ದೃಶ್ಯ ವೈಭವಗಳು, ವೈವಿಧ್ಯಮಯ ನಟರ ತಂಡವು ಪೌರಾಣಿಕ ಪಾತ್ರಗಳಿಗೆ ಹೊಸ ಜೀವ ತುಂಬಲಿದೆ. ಇದನ್ನೂ ಓದಿ:ವಿಜಯ್ ದೇವರಕೊಂಡಗೆ ಸಾಯಿ ಪಲ್ಲವಿ ನಾಯಕಿ

Shrimad Ramayana 1

ಪ್ರತಿ ಸಂಚಿಕೆಯ 250 ವೀಕ್ಷಕರಿಗೆ ಒಟ್ಟು 2.5 ಲಕ್ಷ ರೂಪಾಯಿ ನಗದು ಬಹುಮಾನ ಗೆಲ್ಲುವ ಅವಕಾಶವನ್ನು ಕಲ್ಪಿಸಿದೆ. ಸೀರಿಯಲ್ ವೀಕ್ಷಿಸಿ ಕೊನೆಯಲ್ಲಿ ಕೇಳಲಾಗುವ ಪ್ರಶ್ನೆಗಳಿಗೆ ಮಿಸ್ಡ್ ಕಾಲ್ ಮೂಲಕ ಸರಿ ಉತ್ತರ ನೀಡಿದವರಿಗೆ ತಲಾ ಒಂದು ಸಾವಿರ ಬಹುಮಾನವನ್ನು ಅಂದೇ ಸಂದಾಯವಾಗುವಂತೆ ಯೋಜನೆ ರೂಪಿಸಲಾಗಿದೆ. ಸೀರಿಯಲ್ ಸೋಮವಾರದಿಂದ ಶನಿವಾರದವರೆಗೆ ಮೇ 20ರಿಂದ ಸಂಜೆ 6 ಗಂಟೆಗೆ ಉದಯ ಟಿವಿದಲ್ಲಿ ಪ್ರಸಾರವಾಗಲಿದೆ.

Share This Article