ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2023ರ ಏಕದಿನ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯ ನಡೆಯುತ್ತಿದೆ. ಆಸ್ಟ್ರೇಲಿಯಾ (Australia) ಮತ್ತು ಪಾಕಿಸ್ತಾನದ ನಡುವೆ ಮೊದಲ ಪಂದ್ಯ ನಡೆಯುತ್ತಿದ್ದು, ಪಾಕ್ ಆಟಗಾರರ ವಿರುದ್ಧ ಹಿಂದೂ ಸಂಘಟನೆಯ ಕಾರ್ಯಕರ್ತರು (Hindu Activists) ಪ್ರತಿಭಟನೆ ನಡೆಸಿದ್ದಾರೆ.
ಶುಕ್ರವಾರ ಸಂಜೆ ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy Stadium) ಎದುರು ಜಮಾಯಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು `ಗೋ ಬ್ಯಾಕ್ ರಿಜ್ವಾನ್’ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: World Cup 2023: ಟೀಂ ಇಂಡಿಯಾಕ್ಕೆ ಮತ್ತೆ ಆಘಾತ – ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಪಾಂಡ್ಯ ಔಟ್
ಶ್ರೀಲಂಕಾ ವಿರುದ್ಧ ಹೈದರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಶತಕ ಬಾರಿಸಿದ ಪಾಕ್ ಕ್ರಿಕೆಟಿಗ ಮೊಹಮ್ಮದ್ ರಿಜ್ವಾನ್ (Mohammad Rizwan), ತಮ್ಮ ಶತಕವನ್ನು ಪ್ಯಾಲೆಸ್ತೀನಿಯರಿಗೆ ಅರ್ಪಿಸಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಗೆಟ್ ಔಟ್ ರಿಜ್ವಾನ್, ರಿಜ್ವಾನ್ ಹಠಾವೋ ಕ್ರಿಕೆಟ್ ಬಚಾವೋ, ಗೋ ಬ್ಯಾಕ್ ರಿಜ್ವಾನ್ ಹೀಗೆ ಘೋಷಣಾ ಫಲಕಗಳನ್ನು ಹಿಡಿದು ಆಕ್ರೋಶ ಹೊರಹಾಕಿದ್ದಾರೆ.
ಬಳಿಕ ವಿವೇಕನಗರ ನಗರದ ಪೊಲೀಸರು ಹಿಂದೂ ಕಾರ್ಯಕರ್ತರಿಂದ ಘೋಷಣಾ ಫಲಕಗಳನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಇದನ್ನೂ ಓದಿ: World Cup 2023: ದಾಖಲೆ ಸೃಷ್ಟಿಸಿದ ವಾರ್ನರ್, ಮಿಚೆಲ್ ಮಾರ್ಷ್ ಶತಕಗಳ ಜೊತೆಯಾಟ – ಪಾಕ್‌ಗೆ 368 ರನ್‌ಗಳ ಗುರಿ
ಶುಕ್ರವಾರ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 367 ರನ್ ಗಳಿಸುವ ಮೂಲಕ ಎದುರಾಳಿ ಪಾಕ್ ತಂಡಕ್ಕೆ 368 ರನ್‌ಗಳ ಗುರಿ ನೀಡಿದೆ. ಇದನ್ನೂ ಓದಿ: ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಒಣಗ್ತಿರೋ ಬೆಳೆ- ಸರ್ಕಾರದ ವಿರುದ್ಧ ರೈತ ಆಕ್ರೋಶ
Web Stories