ಚಿಕ್ಕಮಗಳೂರು: ಮಹಾತ್ಮ ಗಾಂಧಿ ಕೊಂದವರು, ನನ್ನನ್ನ ಬಿಡ್ತಾರಾ ಎಂದು ಬಿಜೆಪಿ ಪ್ರತಿಭಟನಾಕಾರರ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಕಾಫಿನಾಡು ಚಿಕ್ಕಮಗಳೂರು ಪ್ರವಾಸದಲ್ಲಿರುವ ಸಿದ್ದರಾಮಯ್ಯನವರು ಮಾತನಾಡಿ, ಮಹಾತ್ಮ ಗಾಂಧಿಯನ್ನೇ ಕೊಂದವರು, ನನ್ನನ್ನು ಬಿಡುತ್ತಾರಾ? ಮಹಾತ್ಮಾ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆ ಅವರ ಫೋಟೋವನ್ನು ಇಟ್ಟು ಬಿಜೆಪಿ ಯವರು ಪೂಜೆ ಮಾಡುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣ – ತಡರಾತ್ರಿ ಬಿಜೆಪಿಯ 9 ಮಂದಿ ಬಂಧನ, ಬಿಡುಗಡೆ
Advertisement
Advertisement
ಮತ್ತೊಂದೆಡೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಹಿಂದೂ ಸಂಘಟನೆ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಅಲ್ಲದೇ ಪ್ರತಿಭಟನೆ ವೇಳೆ ಸಾವರ್ಕರ್ ಫೋಟೋ ಹಿಡಿದು ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಹತ್ಯೆಗೆ RSS, ಬಿಜೆಪಿ ಸಂಚು ಮಾಡಿದೆ: ಶಿವರಾಮ್ ಗಂಭೀರ ಆರೋಪ
Advertisement
ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಗುರುವಾರ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದ ವೇಳೆ `ಕೊಡಗಿನ ವಿರೋಧಿ, ಕೊಡವರ ವಿರೋಧಿ ಸಿದ್ದರಾಮಯ್ಯ ಎಂಬಿತ್ಯಾದಿ ಘೋಷಣೆಗಳ ಮೂಲಕ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಅಲ್ಲದೇ ಅಲ್ಲಿನ ತಿಮ್ಮಯ್ಯ ವೃತ್ತದಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಮುಖಾಮುಖಿಯಾಗಿದ್ದು ವಾತಾವರಣ ಉದ್ವಿಗ್ನಗೊಂಡಿತ್ತು. ಇದೇ ವೇಳೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದರು. ಈ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿದೆ.