ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಸಿಂದ್ ಪ್ರಾಂತ್ಯದ ಹೈದರಾಬಾದ್‍ನಲ್ಲಿ ಹಿಂದೂ ಹುಡುಗಿಯೊಬ್ಬಳನ್ನು (Girl) ಅಪಹರಿಸಿದ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿ ಹುಡುಗಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಚಂದ್ರ ಮೆಹರಾಜ್ ಎಂಬಾಕೆ ಹೈದರಾಬಾದ್‍ನ ಫತೇ ಚೌಕ್‍ನಿಂದ ಮನೆಗೆ ಮರಳುತ್ತಿದ್ದಾಗ ಅವಳನ್ನು ಕಿಡ್ನ್ಯಾಪ್ (Kidnap) ಮಾಡಿದ್ದಾರೆ ಎಂದು ದೂರಿನಲ್ಲಿ ಆಕೆಯ ಪೋಷಕರು ತಿಳಿಸಿದ್ದಾರೆ. ಆದರೆ ಈವರೆಗೆ ಆಕೆ ಪತ್ತೆಯಾಗಿಲ್ಲ.
ಕೇವಲ 2 ವಾರದಲ್ಲಿ ಬೆಳಕಿಗೆ ಬಂದ 4ನೇ ಪ್ರಕರಣ ಇದಾಗಿದೆ. ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೂವರು ಮಹಿಳೆಯರನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಿದ ಘಟನೆಗಳು ಪಾಕಿಸ್ತಾನದಲ್ಲಿ ಇತ್ತೀಚೆಗೆ ಹೆಚ್ಚು ಬೆಳಕಿಗೆ ಬರುತ್ತಿವೆ. ಸೆ.24ರಂದು ಮೀನಾ ಮೇಘವಾರ್ ಎಂಬ 14 ವರ್ಷದ ಬಾಲಕಿಯನ್ನು ನಾಸರ್‌ಪುರ ಪ್ರದೇಶದಿಂದ ಅಪಹರಿಸಲಾಯಿತು. ಹಾಗೂ ಮಿರ್ಪುರ್ಖಾಸ್ ಪಟ್ಟಣದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಮತ್ತೊಬ್ಬ ಹಿಂದೂ ಹುಡುಗಿಯನ್ನು ಅಪಹರಿಸಲಾಗಿತ್ತು. ಇದನ್ನೂ ಓದಿ: ಭಾರತ್ ಜೋಡೋ ಪಾದಯಾತ್ರೆ ನಡುವೆ ಸಿಲುಕಿದ್ದ ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ರಾಹುಲ್ ಗಾಂಧಿ
ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಜೂನ್‍ನಲ್ಲಿ ಹದಿಹರೆಯದ ಹಿಂದೂ ಹುಡುಗಿ ಕರೀನಾ ಕುಮಾರಿಯನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಿಸಿದ್ದರು. ನಂತರ ಮುಸ್ಲಿಂ ವ್ಯಕ್ತಿಯನ್ನು ಮದುವೆ ಮಾಡಿಸಿರುವುದಾಗಿ ನ್ಯಾಯಾಲಯದಲ್ಲಿ ಹೇಳಿದ್ದಳು. ಮಾರ್ಚ್‍ನಲ್ಲಿ ಪಾಕಿಸ್ತಾನಿ ವ್ಯಕ್ತಿಯ ಮದುವೆ ಪ್ರಸ್ತಾಪವನ್ನು ನಿರಾಕರಿಸಿದ ಕಾರಣಕ್ಕೆ ಹಿಂದೂ ಹುಡುಗಿಯನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಇದನ್ನೂ ಓದಿ: ರಾಹುಲ್ ಗಾಂಧಿ ಪಾದಕ್ಕೂ ಬಿಎಸ್‍ವೈ ಸಮ ಇಲ್ಲ ಎಂದು ನಾನು ಹೇಳಲ್ಲ: ಸಿದ್ದರಾಮಯ್ಯ
ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿಯ ಫ್ಯಾಕ್ಟ್‌ಬುಕ್ ಪ್ರಕಾರ, 2020ರ ಮಾಹಿತಿಯ ಪ್ರಕಾರ ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಇತರ ಅಲ್ಪಸಂಖ್ಯಾತರು ಪಾಕಿಸ್ತಾನದ ಜನಸಂಖ್ಯೆಯಲ್ಲಿ ಕೇವಲ 3.5 ಪ್ರತಿಶತದಷ್ಟಿದ್ದಾರೆ.