ಹಿಂದೂ ಹುಡುಗಿಯರು ಎಚ್ಚರಿಕೆಯಿಂದ ಡೇಟಿಂಗ್ ಮಾಡಿ – ಪ್ರಮೋದ್ ಮುತಾಲಿಕ್

Public TV
2 Min Read
Pramod Muthalik 2

ಧಾರವಾಡ: ಇತ್ತೀಚೆಗೆ ದೆಹಲಿಯಲ್ಲಿ (NewDelihi) ನಡೆದ ಭೀಕರ ಘಟನೆ ತಾಲಿಬಾನ್ (Taliban) ಕೃತ್ಯಕ್ಕಿಂತಲೂ ಕೆಟ್ಟದಾಗಿದೆ. ಆದ್ದರಿಂದ ಹಿಂದೂ ಹುಡುಗಿಯರು ಎಚ್ಚರಿಕೆಯಿಂದ ಪಾಠ ಕಲಿಯಬೇಕು. ಪ್ರೀತಿ (Love) ಮಾಡುವಾಗ, ಡೇಟಿಂಗ್ (Dating) ಮಾಡುವಾಗ ವಿಚಾರ ಮಾಡಿ ಮಾಡಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಸಲಹೆ ನೀಡಿದ್ದಾರೆ.

DATING APP 2

ಧಾರವಾಡದಲ್ಲಿಂದು (Darwad) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ದೆಹಲಿಯಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ (Live In RelationShip) ಗೆಳತಿಯನ್ನು 35 ಪೀಸ್‌ಗಳಾಗಿ ಮಾಡಿ ಹತ್ಯೆಮಾಡಿರುವ ಘಟನೆ ತಾಲಿಬಾನಿಗಳ (Taliban) ಕೃತ್ಯಕ್ಕಿಂತೂ ಕೆಟ್ಟದಾದದ್ದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೆನ್ನಾರ್ ನದಿ ನೀರು ಹಂಚಿಕೆ ವಿವಾದ – ನ್ಯಾಯಧಿಕರಣ ರಚನೆಗೆ ಕೇಂದ್ರದ ಒಲವು

SHRADDA AFTAB

ಲವ್ ಜಿಹಾದ್‌ಗೆ (Love Jihad) ಬಲಿಯಾಗುವ ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೆ ನಾನು 15 ವರ್ಷಗಳಿಂದಲೂ ಎಚ್ಚರಿಕೆ ಕೊಡುತ್ತಲೇ ಬಂದಿದ್ದೇನೆ. ಇಷ್ಟೆಲ್ಲಾ ಎಚ್ಚರಿಕೆ ಕೊಟ್ಟರೂ ದೆಹಲಿಯಲ್ಲಿ ನಡೆದ ಇದೊಂದು ಘಟನೆ ದೊಡ್ಡ ದುರಂತವೇ ಸರಿ ಎಂದಿದ್ದಾರೆ. ಇದನ್ನೂ ಓದಿ: ಅಫ್ತಾಬ್‌ಗೆ ಮಂಪರು ಪರೀಕ್ಷೆ – ಪೊಲೀಸರಿಗೆ ಕೋರ್ಟ್‌ ಅನುಮತಿ

ಹಿಂದೂ ಹುಡುಗಿಯರು ಇದರಿಂದ ಎಚ್ಚರಿಕೆಯ ಪಾಠ ಕಲಿಯಬೇಕು, ಯಾರ ಜೊತೆ ಪ್ರೀತಿ ಮಾಡುತ್ತಿದ್ದೇನೆ, ಯಾರ ಜೊತೆ ಡೇಟಿಂಗ್ ಮಾಡುತ್ತಿದ್ದೇನೆ ಎಂಬ ಅರಿವಿರಬೇಕು. ದೆಹಲಿಯ ಘಟನೆಯ ನಂತರ ಆ ಯುವಕ ಮತ್ತೆ ನಾಲ್ಕು ಜನ ಹಿಂದೂ ಹುಡುಗಿಯರ ಜೊತೆ ಸುತ್ತಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯೇ ಅಂತಿಮ, ಕೋರ್ಟ್ ಸಹ ವಿಳಂಬ ಮಾಡದೆ, ಒಂದೇ ತಿಂಗಳಲ್ಲಿ ಈ ಪ್ರಕ್ರಿಯೆ ಮುಗಿಸಿ ಆತನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.

SHRADDA AFTAB 1

ಹುಬ್ಬಳ್ಳಿಯಲ್ಲಿ ಮೇಲಿಂದ ಮೇಲೆ ಮತಾಂತರ ಪ್ರಕ್ರಿಯೆ ನಡೆಯುತ್ತಿದೆ. ಈ ಹಿಂದೆ ಎರಡು ಪ್ರಕರಣಗಳು ನಡೆದಿದ್ದವು. ಇದೀಗ ಚಿಕ್ಕಲಗೇರಿ ಎನ್ನುವ ಸಣ್ಣ ಬಡ ಕುಟುಂಬದ ಮೇಲೆ ಮತಾಂತರ ಆಗಿದೆ. ಪತಿ, ಪತ್ನಿಯರಿಗೆ ಜಗಳ ಹಚ್ಚಿ ಪತ್ನಿಯನ್ನು ಮತಾಂತರ ಮಾಡಿದ್ದಾರೆ. ಪತ್ನಿಯ ಮೂಲಕ ಗಂಡನಿಗೆ ಒತ್ತಾಯ ಮಾಡುವ ಪ್ರಕ್ರಿಯೆ ನಡೆದಿದೆ. ಈ ಜಗಳ ವಿಕೋಪಕ್ಕೆ ಹೋಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಕ್ರೇನ್ ವಿರುದ್ಧ ಮತ್ತೆ ಸಮರ ಸಾರಿದ ರಷ್ಯಾ – ಒಂದೇ ಬಾರಿಗೆ 100 ಕ್ಷಿಪಣಿ ಉಡಾವಣೆ

UDUPI PRAMOD MUTHALIK 1

ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಈ ರೀತಿ ನಡೆಯುತ್ತಲೇ ಇದೆ. ಈ ನಿರ್ಲಕ್ಷ್ಯ ಸರ್ಕಾರದ್ದು, ಕೇವಲ ಕಾನೂನು ಮಾಡುವುದಲ್ಲ, ಅದನ್ನು ಜಾರಿ ಮಾಡಬೇಕು. ಕ್ರಿಶ್ಚಿಯನ್ ಮತಾಂತರ ಎನ್ನುವುದು ಬಹಳ ದೊಡ್ಡ ಗಂಡಾಂತರ, ಇದನ್ನು ತಡೆಯದೇ ಇದ್ದರೆ ದೇಶಕ್ಕೆ ದೊಡ್ಡ ಅಪಾಯ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *