ಉಡುಪಿ: ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಉಡುಪಿ ಜಿಲ್ಲಾ ಪ್ರವೇಶಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕೊರಗಜ್ಜನಿಗೆ ದೂರು ನೀಡಿದ ಪ್ರಸಂಗ ನಡೆದಿದೆ.
Advertisement
ಮುತಾಲಿಕ್ ನಿಷೇಧ ಹೇರಿರುವ ಸಂಬಂಧ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕುಂದಾಪುರ ತಾಲೂಕು ಮುಳ್ಳಿಕಟ್ಟೆ ಕೊರಗಜ್ಜನ ಮೊರೆಹೋಗಿದ್ದಾರೆ. ಗಂಗೊಳ್ಳಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಏಳು ಕಿಲೋಮೀಟರ್ ಪಾದಯಾತ್ರೆ ಮಾಡಿ ಕೊರಗಜ್ಜನಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲೂ ಬುಲ್ಡೋಜರ್ ಕಾರ್ಯಾಚರಣೆಗೆ ಹೆಚ್ಚಿದ ಒತ್ತಡ: ಬಿಜೆಪಿಯಲ್ಲಿ ಭಿನ್ನ ನಿಲುವು
Advertisement
Advertisement
ಹಿಂದೂ ಜಾಗರಣ ವೇದಿಕೆಯಿಂದ ಸತ್ಯನಾರಾಯಣ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಪೂಜೆಯ ಧಾರ್ಮಿಕ ಸಭೆಯಲ್ಲಿ ಪ್ರಮೋದ್ ಮುತಾಲಿಕ್ ಭಾಗವಹಿಸಬೇಕಿದ್ದರು. ಆದರೆ ಸರ್ಕಾರ ಮುತಾಲಿಕ್ ಜಿಲ್ಲೆಗೆ ಬರದಂತೆ ನಿಷೇಧಾಜ್ಞೆ ಹೊರಡಿಸಿತ್ತು. ಅಲ್ಲದೆ ಮುತಾಲಿಕ್ ಬಂದರೆ ಶಾಂತಿ ಕದಡುತ್ತದೆ ಎಂದು ಜಿಲ್ಲಾಡಳಿತ ಹೇಳಿತ್ತು.
Advertisement
ಆ ಬಳಿಕ ಮುತಾಲಿಕ್ ಆಗಮನಕ್ಕೆ ತಡೆ ಒಡ್ಡಿದವರ ವಿರುದ್ಧ ಹಿಂದೂ ಕಾರ್ಯಕರ್ತರಲ್ಲಿ ಆಕ್ರೋಶ ಹೊರಹಾಕಿದ್ದರು. ಮುತಾಲಿಕ್ ನಿಷೇಧದ ಹಿಂದೆ ಕಾಣದ ಕೈಗಳ ಕೈವಾಡ ಇದೆ. ಅವರನ್ನು ಕೊರಗಜ್ಜನೇ ಶಿಕ್ಷಿಸಲಿ ಎಂದು ಕಾರ್ಯಕರ್ತರು ಹೇಳಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಮಾಸ್ಕ್ ಕಡ್ಡಾಯ – ಹಾಕದಿದ್ದರೆ 500 ರೂ. ದಂಡ