– ಮೇ 26ರಂದೂ ಎರಡು ಶೋ ಪ್ರದರ್ಶನ ಉಚಿತ
ದಾವಣಗೆರೆ: ದೇಶಾದ್ಯಂತ ಭಾರೀ ವಿವಾದ ಹುಟ್ಟುಹಾಕಿರುವ `ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಸಾಕಷ್ಟು ಸುದ್ದಿ ಮಾಡುತ್ತಿದೆ. ಕೆಲವು ರಾಜ್ಯಗಳಲ್ಲಿ ಸಿನಿಮಾ ಪ್ರದರ್ಶನ ನೀಡದಂತೆ ಬ್ಯಾನ್ ಮಾಡಿದ್ದು, ಕೆಲವೆಡೆ ಲವ್ ಜಿಹಾದ್ ಬಗ್ಗೆ ಜಾಗೃತಿ ಮೂಡಿಸುವ ಸಿನಿಮಾ ಎಂದು ಮೆಚ್ಚುಗೆ ವ್ಯಕ್ತವಾಗುತ್ತಿದೆ.
Advertisement
ಈ ನಡುವೆ ದಾವಣಗೆರೆಯಲ್ಲಿ (Davanagere) ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ (College Students) ಉಚಿತವಾಗಿ ಸಿನಿಮಾ ಪ್ರದರ್ಶನ ಏರ್ಪಡಿಸಿದ್ದು. ಪ್ರೇರಣಾ ಯುವ ಸಂಸ್ಥೆ ಹಾಗೂ ಹಿಂದೂ ಜಾಗರಣ ವೇದಿಕೆ ಸಹಯೋಗದಲ್ಲಿ ನಗರದ ತ್ರಿಶೋಲ್ ಚಿತ್ರಮಂದಿರಗಳಲ್ಲಿ ಗುರುವಾರ ಹಾಗೂ ಶುಕ್ರವಾರ (ಮೇ 26) ಎರಡು ಪ್ರದರ್ಶನಗಳನ್ನ ಕೇವಲ ವಿದ್ಯಾರ್ಥಿನಿಯರು ಮಾತ್ರ ವೀಕ್ಷಿಸಿಲು ಅವಕಾಶ ಮಾಡಿಕೊಡಲಾಗಿದೆ.
Advertisement
Advertisement
ಮೊದಲ ದಿನವೇ ದಾವಣಗೆರೆಯ ವಿವಿಧ ಕಾಲೇಜುಗಳ ಸಾವಿರಾರು ವಿದ್ಯಾರ್ಥಿನಿಯರು ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಮುಖಂಡ ಹಾಗೂ ಮಾಜಿ ಮೇಯರ್ ಎಸ್.ಟಿ ವೀರೇಶ್ ಸೇರಿದಂತೆ ಹಲವು ಹಿಂದೂ ಪರ ಸಂಘಟನೆಯ ಮುಖಂಡರು (Hindu Organisations) ವಿದ್ಯಾರ್ಥಿನಿಯರಿಗೆ ಸಾಥ್ ನೀಡಿದ್ದಾರೆ.
Advertisement
ವಿದ್ಯಾರ್ಥಿನಿಯರು ಹಾಗೂ ಮಹಿಳೆಯರು ಜಾಗೃತವಾಗಲು ಈ ಸಿನಿಮಾ ಸಹಕಾರಿಯಾಗಿದೆ. ಅಲ್ಲದೆ ನೈಜ್ಯ ಘಟನೆಗಳನ್ನು ಒಳಗೊಂಡ ಸಿನಿಮಾವಾಗಿದೆ. ಇದನ್ನು ಪ್ರತಿಯೊಬ್ಬರು ನೋಡಬೇಕು ಎಂದು ವಿದ್ಯಾರ್ಥಿನಿಯರು ಹಾಗೂ ಹಿಂದೂಪರ ಸಂಘಟನೆ ಮುಖಂಡರು ಮನವಿ ಮಾಡಿಕೊಂಡಿದ್ದಾರೆ.