CinemaLatestMain Post

ಹಿಂದೂ ದೇವರ ಅಪಹಾಸ್ಯ: ಅಜಯ್ ದೇವಗನ್ ನಟನೆಯ ‘ಥ್ಯಾಂಕ್ ಗಾಡ್’ ಸಿನಿಮಾ ನಿಷೇಧಕ್ಕೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ

ಬಾಲಿವುಡ್ ನಟ ಅಜಯ ದೇವಗನ್ (Ajay devgan)ನಟನೆಯ ‘ಥ್ಯಾಂಕ್ ಗಾಡ್’ ಸಿನಿಮಾವನ್ನು ನಿಷೇಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ. ಈ ಸಿನಿಮಾದಲ್ಲಿ ಹಿಂದೂ ದೇವರನ್ನು ಅಪಹಾಸ್ಯ ಮಾಡಲಾಗಿದ್ದು, ಇಂತಹ ಚಿತ್ರಗಳನ್ನು ಸೆನ್ಸಾರ್ ಮಂಡಳಿಯವರು ಬಿಡುಗಡೆ ಮಾಡಲು ಹೇಗೆ ಅನುಮತಿ ನೀಡುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಟ್ರೈಲರ್ ಗೂ ಕೂಡ ಸರ್ಟಿಫಿಕೇಟ್ ನೀಡಲಾಗುತ್ತದೆ. ಈ ಸಿನಿಮಾದ ದೃಶ್ಯವನ್ನು ನೋಡುವಾಗ ಸೆನ್ಸಾರ್ ಮಂಡಳಿ ನಿದ್ದೆ ಮಾಡುತ್ತಿತ್ತೆ? ಎಂದಿದ್ದಾರೆ ಹಿಂದೂ ಜನ ಜಾಗತಿ ಸದಸ್ಯರು.

ಬಿಡುಗಡೆಯಾದ ಟ್ರೇಲರ್ ನಲ್ಲಿ ಹಿಂದೂ ಧರ್ಮದಲ್ಲಿ ಮೃತ್ಯುವಿನ ನಂತರ ಪ್ರತಿಯೊಬ್ಬರ ಪಾಪ-ಪುಣ್ಯಗಳನ್ನು ಲೆಕ್ಕ ಹಾಕುವ ‘ಚಿತ್ರಗುಪ್ತ’ ದೇವರು ಮತ್ತು ಮೃತ್ಯುವಿನ ನಂತರ ಆತ್ಮವನ್ನು ತೆಗೆದುಕೊಂಡು ಹೋಗುವ ಯಮದೇವನನ್ನು ಆಧುನಿಕ ರೂಪದಲ್ಲಿ ತೋರಿಸಲಾಗಿದೆ. ಅವರನ್ನು ನಿಷ್ಪ್ರಯೋಜಕ ಹಾಸ್ಯದ ಮಾತುಗಳನ್ನಾಡುವಂತೆ ಚಿತ್ರಿಸಲಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಹಿಂದೂ ಧರ್ಮದ ಚಿತ್ರಗುಪ್ತ ಮತ್ತು ಯಮ ದೇವರ ಅಪಹಾಸ್ಯವನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದಿದ್ದಾರೆ ಹಿಂದೂ ಜನ ಜಾಗೃತಿಯ ಸದಸ್ಯರು. ಇದನ್ನೂ ಓದಿ:ಬಂಧನದ ಭೀತಿಯಿಂದ ಕೇರಳಕ್ಕೆ ಎಸ್ಕೇಪ್ ಆದ್ರಾ ನಟಿ ಶ್ರೀಲೀಲಾ ತಾಯಿ?: ಮನೆಗೆ ಬೀಗ, ಮೊಬೈಲ್ ಆಫ್

ನಿನ್ನೆಯಷ್ಟೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಬಾಲಿವುಡ್ ನಟ ಅಜಯ್ ದೇವಗನ್ ಸೇರಿದಂತೆ ಮೂವರು ಮೇಲೆ ದೂರು (Complaint) ದಾಖಲಾಗಿದೆ. ಇನ್ನೆಷ್ಟೇ ರಿಲೀಸ್ ಆಗಬೇಕಿರುವ ಅಜಯ್ ದೇವಗನ್ ನಟನೆಯ ‘ಥ್ಯಾಂಕ್ ಗಾಡ್’ (Thank god) ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಅದರಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸನ್ನಿವೇಶವಿದೆ ಎಂದು ಹಿಮಾಂಶು ಶ್ರೀವಾಸ್ತವ್ ಎನ್ನುವವರು ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮೋನಿಕಾ ಮಿಶ್ರಾ ಅವರ ನ್ಯಾಯಾಲದಲ್ಲಿ (Court) ಪ್ರಕರಣ ದಾಖಲಾಗಿದೆ.

ಥ್ಯಾಂಕ್ ಗಾಡ್ ಸಿನಿಮಾದಲ್ಲಿ ಚಿತ್ರಗುಪ್ತ ದೇವರನ್ನು ಪೂಜಿಸುವ ಕಾಯಸ್ಥ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಹಿಮಾಂಶು 9Himanshu Srivastav) ಆರೋಪ ಮಾಡಿದ್ದು, ಚಿತ್ರದ ನಟ ಅಜಯ್ ದೇವಗನ್, ಸಿದ್ಧಾರ್ಥ ಮಲ್ಹೋತ್ರಾ ಹಾಗೂ ಇಂದ್ರ ಕುಮಾರ್ ಮೇಲೆ ದೂರು ನೀಡಿದ್ದರು. ಹಿಮಾಂಶು ಅವರ ಹೇಳಿಕೆಯನ್ನು ದಾಖಲಿಸಲು ನ್ಯಾಯಾಧೀಶರು ನವೆಂಬರ್ 18 ದಿನಾಂಕ ನಿಗದಿ ಮಾಡಿದ್ದಾರೆ.

ಅಜಯ್ ದೇವಗನ್ ಮುಖ್ಯ ಭೂಮಿಕೆಯ ಥ್ಯಾಂಕ್ ಗಾಡ್ ಸಿನಿಮಾ ತನ್ನದೇ ಆದ ಕಾರಣಗಳಿಂದಾಗಿ ಕುತೂಹಲ ಮೂಡಿಸಿದೆ. ಈಗಾಗಲೇ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಸಖತ್ ಮನರಂಜನೆ ಜೊತೆಗೆ ಒಂದೊಳ್ಳೆ ಸಂದೇಶವನ್ನು ನೀಡುವಂತಹ ಸಿನಿಮಾ ಇದಾಗಿದೆ. ಅಜಯ್ ದೇವಗನ್ ಕೂಡ ತುಂಬಾ ಚೆನ್ನಾಗಿ ನಟಿಸಿದ್ದಾರೆ. ಅಕ್ಟೋಬರ್ 25ಕ್ಕೆ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಟ್ರೈಲರ್ ಸದ್ದು ಮಾಡುತ್ತಿದೆ.

Live Tv

Leave a Reply

Your email address will not be published.

Back to top button