ಢಾಕಾ: ಇಸ್ಲಾಂ ಧರ್ಮದ ವಿರುದ್ಧ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ಮನೆಗೆ ಮತ್ತು ದೇವಾಲಯವೊಂದಕ್ಕೆ ಬೆಂಕಿ ಹಚ್ಚಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ.
Advertisement
ಶುಕ್ರವಾರ ಸಂಜೆ ದಿಘೋಲಿಯಾ ಗ್ರಾಮದಲ್ಲಿರುವ ಹಲವಾರು ಮನೆಗಳನ್ನು ಧ್ವಂಸಗೊಳಿಸಿದ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಎಚ್ಚರಿಕೆ ನೀಡಿದರು. ಆದರೆ ಈ ವೇಳೆ ಒಂದು ಮನೆಯನ್ನು ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ. ಅಲ್ಲದೇ ಪೊಲೀಸರ ಮೇಲೆ ದಾಳಿಕೋರರು ಕಲ್ಲು ತೂರಾಟವನ್ನು ನಡೆಸಿದ್ದಾರೆ ಎಂದು ಸ್ಥಳೀಯ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಹರನ್ ಚಂದ್ರ ಪಾಲ್ ಹೇಳಿದ್ದಾರೆ. ಇದನ್ನೂ ಓದಿ: ಹಳೆಯ ವೈಷಮ್ಯ – ಮಾರಕಾಸ್ತ್ರದಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಹತ್ಯೆ
Advertisement
Advertisement
ಈ ಬಗ್ಗೆ ಪ್ರತಿಕ್ರಿಯಿಸಿರುವ ಯುವಕ ಹರನ್, ಫೇಸ್‍ಬುಕ್‍ನಲ್ಲಿ ವ್ಯಕ್ತಿಯೊಬ್ಬ ಪೋಸ್ಟ್‌ವೊಂದನ್ನು ಮಾಡಿದ್ದು, ಇದರಿಂದ ಮುಸ್ಲಿಮರು ರೊಚ್ಚಿಗೆದ್ದು, ನಂತರ ದಾಳಿ ನಡೆಸಿದ್ದಾರೆ ಎಂದು ಹೇಳಿದ್ದಾನೆ ಇದೀಗ ಆಕಾಶ್ ಹಾಗೂ ಆತನ ತಂದೆ ಅಶೋಕ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಡ್ರೋನ್‌ಗೆ ಗುಂಡು -ಸೇನೆಯ ದಾಳಿಗೆ ಮರಳಿ ಪಾಕಿಗೆ ಓಡಿ ಹೋಯ್ತು