ಹಿಂದೂ ಕಾರ್ಯಕರ್ತ ಸುಹಾಸ್‌ ಹತ್ಯೆ ಖಂಡಿಸಿ ಇಂದು ದ.ಕನ್ನಡ ಜಿಲ್ಲೆ ಬಂದ್‌ಗೆ ಕರೆ

Public TV
1 Min Read
mangaluru bandh suhas shetty

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಯನ್ನು ಖಂಡಿಸಿ ಇಂದು (ಶುಕ್ರವಾರ) ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ಹಿಂದೂ ಸಂಘಟನೆಗಳು ಕರೆ ಕೊಟ್ಟಿವೆ.

ಬಂದ್‌ಗೆ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಕರೆ ನೀಡಿವೆ. ಈ ಬಗ್ಗೆ ವಿಹೆಚ್‌ಪಿ ದಕ್ಷಿಣ ಪ್ರಾಂತ ಕಾರ್ಯವಾಹ ಶರಣ್‌ ಪಂಪ್‌ ವೆಲ್‌ ತಮ್ಮ ಫೇಸ್‌ಬುಕ್‌ ಪುಟದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: Mangaluru | ಕಾರಿಗೆ ಮೀನಿನ ಟೆಂಪೋ ಗುದ್ದಿಸಿ ಸಾರ್ವಜನಿಕವಾಗಿ ಸುಹಾಸ್ ಶೆಟ್ಟಿ ಹತ್ಯೆ

Mangaluru Suhas Shetty Murder

ಉದ್ರಿಕ್ತ ಗುಂಪಿನಿಂದ ಬಸ್ಸಿಗೆ ಕಲ್ಲು ತೂರಾಟ ನಡೆಸಲಾಗಿದೆ. ಮೂರು ಬಸ್ಸಿಗೆ ಕಿಡಿಗೇಡಿಗಳ ಕಲ್ಲು ತೂರಾಟದಿಂದ ಹಾನಿಯಾಗಿದೆ.

ಏನಿದು ಘಟನೆ?
ಸುಹಾಸ್ ಶೆಟ್ಟಿ ಬರುತ್ತಿದ್ದ ಇನ್ನೋವಾ ಕಾರನ್ನು ಮೀನಿನ ಟೆಂಪೋ ಹಾಗೂ ಒಂದು ಸ್ವಿಫ್ಟ್ ಕಾರು ಹಿಂಬಾಲಿಸಿಕೊಂಡು ಬಂದಿತ್ತು. ನಂತರ ಮೀನಿನ ಟೆಂಪೋವನ್ನು ಸುಹಾಸ್ ಇದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇನ್ನೋವಾ ಕಾರು ಸಲೂನ್‌ಗೆ ನುಗ್ಗಿದೆ. ಬಳಿಕ ಸ್ವಿಫ್ಟ್ ಕಾರಿನಲ್ಲಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಸಾರ್ವಜನಿಕ ರಸ್ತೆಯಲ್ಲೇ ಸುಹಾಸ್‌ನನ್ನು ಬರ್ಬರವಾಗಿ ಕೊಲೆಗೈದು ಅಲ್ಲಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ

Share This Article