ಬೆಂಗಳೂರು: ದೀಪಾವಳಿ(Deepavali) ಹಬ್ಬಕ್ಕೂ ಧರ್ಮದ ಕಿಚ್ಚು ಹೊತ್ತಿಕೊಂಡಿದೆ. ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನ(Halal Products) ಬಹಿಷ್ಕರಿಸಿ ಎಂದು ಹಿಂದೂ ಸಂಘಟನೆಗಳು(Hindu Organisations) ಕರೆ ಕೊಟ್ಟಿವೆ.
ಹಲಾಲ್ ಪ್ರಮಾಣ ಪತ್ರದ ಹೆಸರಿನಲ್ಲಿ ದೇಶಾದ್ಯಂತ ಹಿಂದೂ ವ್ಯಾಪಾರಿಗಳಿಂದ ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಮಹಾ ಸಭೆ ನಡೆಸಿರುವ ಹಿಂದೂ ಸಂಘಟನೆಗಳು ಪ್ರತಿ ಜಿಲ್ಲೆಗಳಲ್ಲೂ ಅಭಿಯಾನ ನಡೆಸಲು ಮುಂದಾಗಿವೆ. ಇದನ್ನೂ ಓದಿ: ಮತ್ತೆ ಶುರುವಾಯಿತು ಚಾಮರಾಜಪೇಟೆ ಮೈದಾನ ಫೈಟ್ – ಈದ್ಗಾದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಪಟ್ಟು
ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಖರೀದಿಸದಂತೆ, ಕರಪತ್ರಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುತ್ತೇವೆ. ನಮ್ಮ ಅಭಿಯಾನ ರಾಜ್ಯಾದ್ಯಾಂತ ನಡೆಯಲಿದೆ ಎಂದು ಹಿಂದೂ ಜನ ಜಾಗೃತಿ ವೇದಿಕೆಯ ಮೋಹನ್ ಗೌಡ ಹೇಳಿದ್ದಾರೆ.
ಹಬ್ಬಕ್ಕೂ ಮುನ್ನವೇ ಮುಸ್ಲಿಮರ ಅಂಗಡಿಗಳಲ್ಲಿ ಹಲಾಲ್ ಮಾಂಸ ಖರೀದಿಸಬೇಡಿ. ಉತ್ಪನ್ನಗಳನ್ನೂ ಬಹಿಷ್ಕರಿಸಿ ಎಂಬ ಅಭಿಯಾನ ಶುರುವಾಗಿರುವುದು ಧರ್ಮದ ಕಿಡಿ ಹೆಚ್ಚಾಗುವಂತೆ ಮಾಡಿದೆ. ಹಿಂದೂಪರ ಸಂಘಟನೆಗಳ ಅಭಿಯಾನಗಳಿಗೆ ಕೆಲ ಮುಸ್ಲಿಂ ಮುಖಂಡರುಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.