ಚೆನ್ನೈ: ಪ್ರೇಮಿಗಳ ದಿನಾಚರಣೆಯನ್ನು (Valentine’s Day) ವಿರೋಧಿಸಿ ಹಿಂದೂ ಸಂಘಟನೆಯೊಂದು ಬೀದಿ ನಾಯಿಗಳಿಗೆ (Dog) ಮದುವೆ (Marriage) ಮಾಡಿಸಿರುವ ಘಟನೆ ತಮಿಳುನಾಡಿನ (Tamil Nadu) ಶಿವಗಂಗಾದಲ್ಲಿ (Sivaganga) ನಡೆದಿದೆ.
ತಮಿಳುನಾಡಿನ ಹಿಂದೂ ಮುನ್ನಾನಿ ಸಂಘಟನೆ ಪ್ರೇಮಿಗಳ ದಿನವನ್ನು ವಿರೋಧಿಸಿದ್ದು, ಇದು ಭಾರತದ ಸಂಸ್ಕೃತಿಗೆ ವಿರೋಧವಾಗಿದೆ ಎಂದು ಹೇಳಿದೆ. ಈ ಹಿಂದೆಯೂ ಸಂಘಟನೆ ಪ್ರತಿ ವರ್ಷ ಪ್ರೇಮಿಗಳ ದಿನವನ್ನು ವಿರೋಧಿಸಿ ವಿವಿಧ ರೂಪದಲ್ಲಿ ಪ್ರತಿಭಟನೆ ನಡೆಸಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಗುಲಾಬಿಗೆ ಫುಲ್ ಡಿಮ್ಯಾಂಡ್- ಒಂದು ಕೆಂಗುಲಾಬಿಗೆ 60 ರೂ.!
- Advertisement 2
- Advertisement 3
ಸೋಮವಾರ ಹಿಂದೂ ಮುನ್ನಾನಿಯ ಕಾರ್ಯಕರ್ತರು 2 ಬೀದಿ ನಾಯಿಗಳನ್ನು ಕರೆತಂದು, ಅದಕ್ಕೆ ಬಟ್ಟೆ ಹೊದಿಸಿ, ಹಾರ ಹಾಕಿ, ಅಣುಕು ಮದುವೆ ಮಾಡಿಸಿದ್ದಾರೆ.
- Advertisement 4
ಪ್ರೇಮಿಗಳ ದಿನದಂದು ಸಾರ್ವಜನಿಕ ಸ್ಥಳಗಳಲ್ಲಿ ಪ್ರೇಮಿಗಳು ಅನುಚಿತವಾಗಿ ವರ್ತಿಸುತ್ತಾರೆ. ಇದನ್ನು ವಿರೋಧಿಸಿ ಬೀದಿ ನಾಯಿಗಳ ಮದುವೆಯನ್ನು ಮಾಡಲಾಗಿದೆ ಎಂದು ಹಿಂದೂ ಮುನ್ನಾನಿ ಕಾರ್ಯಕರ್ತರು ಹೇಳಿದ್ದಾರೆ. ಇದನ್ನೂ ಓದಿ: ರಿಯಲ್ ಪೊಲೀಸ್ ಕೈಗೆ ಸಿಕ್ಕಿ ಬಿದ್ದ ರೀಲ್ ಪೊಲೀಸ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k