ಲಕ್ನೋ: ಮಹಿಳೆಯೊಬ್ಬರು ಜನ್ಮ ನೀಡಿದ ನವಜಾತ ಶಿಶುವನ್ನು ಮತ್ತೊಂದು ದಂಪತಿಗೆ ಹಸ್ತಾಂತರಿಸಿದ ಆರೋಪದ ಮೇಲೆ ಶಹಜಹಾನ್‌ಪುರದ ಖಾಸಗಿ ಆಸ್ಪತ್ರೆಯನ್ನು ಸ್ಥಳೀಯ ಅಧಿಕಾರಿಗಳು ಸೀಲ್ ಮಾಡಿದ್ದಾರೆ.
ಮಹಿಳೆಯೊಬ್ಬರ ಶಿಶುವನ್ನು ಮುಸ್ಲಿಂ ದಂಪತಿಗೆ ನೀಡಲಾಗಿತ್ತು. ಇದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ (Vishwa Hindu Parishad) ಪ್ರತಿಭಟನೆ ನಡೆಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ನೋಂದಣಿಯಾಗದ ಕಾರಣ ಆಸ್ಪತ್ರೆಯನ್ನು ಸೀಲ್ ಮಾಡಲಾಗಿದೆ ಎಂದು ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ಡಾ.ಆರ್.ಕೆ.ಗೌತಮ್ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಹಿಮಾಂತ ಬಿಸ್ವಾ ಶರ್ಮಾ ರ‍್ಯಾಲಿಯಲ್ಲಿ ಮೈಕ್ ಕಿತ್ತುಕೊಂಡ ಅಪರಿಚಿತ ವ್ಯಕ್ತಿ – ವೀಡಿಯೋ ವೈರಲ್
Advertisement
Advertisement
ನಿಗೋಹಿ ಪೊಲೀಸ್ ಠಾಣೆ ವ್ಯಾಪ್ತಿಯ ಟ್ರಾಲೋಕ್‌ಪುರ ಗ್ರಾಮದ ನಿವಾಸಿ ಸಂಗೀತಾ ಬುಧವಾರ ರಾತ್ರಿ ಹೆರಿಗೆ ನೋವಿನಿಂದ ಶಹಜಹಾನ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಸಂಜಯ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.
Advertisement
ಇಲ್ಲಿ ಸಂಗೀತಾ ಎಂಬ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಸಂಗೀತಾ ಅವರಿಗೆ ಈಗಾಗಲೇ ಐದು ಹೆಣ್ಣು ಮಕ್ಕಳಿರುವುದರಿಂದ ಆರನೆಯ ಮಗುವನ್ನು ನೋಡಿಕೊಳ್ಳಲು ಅಥವಾ ಆಸ್ಪತ್ರೆಯ ಶುಲ್ಕವನ್ನು ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಆ ಮಗುವನ್ನು ಮುಸ್ಲಿಂ ದಂಪತಿಗೆ ಹಸ್ತಾಂತರಿಸಲಾಗಿತ್ತು ಎಂದು ಆಸ್ಪತ್ರೆಯ ಮಾಲೀಕ ಡಾ. ಅಶೋಕ್ ರಾಥೋಡ್ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಧರಿಸಿದ್ದ 41 ಸಾವಿರ ರೂ.ನ ಟೀಶರ್ಟ್ ಕುರಿತು ಬಿಜೆಪಿ ವ್ಯಂಗ್ಯ
Advertisement
ವಿಷಯ ತಿಳಿದ ನಂತರ ಹಿಂದೂ ಸಂಘಟನೆಯ ಮುಖಂಡ ರಾಜೇಶ್ ಅವಸ್ತಿ ಗುರುವಾರ ಸಂಜೆ ನಿಗೋಹಿ ಪೊಲೀಸ್ ಠಾಣೆಗೆ ಆಗಮಿಸಿ ಆಸ್ಪತ್ರೆ ಮಾಲೀಕನ ಪ್ರತಿಕೃತಿಯನ್ನು ಸುಟ್ಟುಹಾಕಿದ್ದರು. ಘಟನೆಯ ಬಗ್ಗೆ ತಿಳಿದ ತಕ್ಷಣ ನಿಗೋಹಿಯ ಖಾಸಗಿ ಆಸ್ಪತ್ರೆಗೆ ಹೆಚ್ಚುವರಿ ಸಿಎಂಒ ಡಾ.ರೋಹ್ತಾಸ್ ನೇತೃತ್ವದ ತಂಡವನ್ನು ಕಳುಹಿಸಿದ್ದೇವೆ ಎಂದು ಸಿಎಂಒ ಗೌತಮ್ ಹೇಳಿದ್ದಾರೆ. ಆದರೆ ಅಷ್ಟರಲ್ಲಿ ಆಸ್ಪತ್ರೆಯ ಮಾಲೀಕ ಪರಾರಿಯಾಗಿದ್ದ.
ದಾಖಲಾತಿ ಇಲ್ಲದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಸೀಲ್ ಮಾಡಲಾಗಿದೆ. ಹೆಚ್ಚುವರಿಯಾಗಿ ಪ್ರಕರಣದ ತನಿಖೆಗೆ ತಂಡವನ್ನು ರಚಿಸಲಾಗಿದೆ. ಗುರುವಾರ ಆಸ್ಪತ್ರೆ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಹಿಡಿಯುವ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.