– ಹೈಕೋರ್ಟ್‌ನಿಂದ ಮಾನನಷ್ಟ ಮೊಕದ್ದಮೆ ವಜಾ
ಬೆಂಗಳೂರು: ಹಿಂದೂ ಪದ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ (Karnataka High Court) ವಜಾಗೊಳಿಸಿದೆ.
Advertisement
‘ಹಿಂದೂ (Hindu) ಎನ್ನುವುದು ಭಾರತೀಯ ಪದವಲ್ಲ. ಅದು ಪರ್ಷಿಯನ್ ನೆಲಕ್ಕೆ ಸೇರಿದ್ದು, ಅದೊಂದು ಅಶ್ಲೀಲ ಪದ’ ಎಂದು ಕಾರ್ಯಕ್ರಮವೊಂದರಲ್ಲಿ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದ ಸಂಬಂಧ ಲೋಕೋಪಯೋಗಿ ಸಚಿವ ಜಾರಕಿಹೊಳಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಇದನ್ನೂ ಓದಿ: 2024-25ರಲ್ಲಿ 1.4 ಲಕ್ಷ ಕೋಟಿ ಸಾಲ ಮಾಡಿದ್ದೇವೆ, ಬೇರೆ ರಾಜ್ಯಗಳಿಗಿಂತ ನಮ್ಮದು ಕಡಿಮೆ: ಸಿದ್ದರಾಮಯ್ಯ
Advertisement
Advertisement
ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಕರಣವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಸೋನಿಯಾ ಗಾಂಧಿ ಮನವೊಲಿಸಲು ವಯನಾಡಿಗೆ ನೂರು ಮನೆ: ಈಶ್ವರಪ್ಪ ವ್ಯಂಗ್ಯ
Advertisement
ಐಪಿಸಿ ಸೆಕ್ಷನ್‌ಗಳಾದ 153 (ಗಲಭೆಗೆ ಪ್ರಚೋದನೆ) ಮತ್ತು 500ರ (ಬೇರೊಬ್ಬರಿಗೆ ಅವಮಾನ ಮಾಡುವುದು) ಅಡಿ ಮೊಕದ್ದಮೆ ದಾಖಲಾಗಿತ್ತು. ಮೊಕದ್ದಮೆ ರದ್ದು ಕೋರಿದ್ದ ಸತೀಶ್ ಜಾರಕಿಹೊಳಿ, ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.