ಒಟ್ಟೋವಾ: ಕೆನಡಾದ (Canada) ಖಲಿಸ್ತಾನ ತೀವ್ರವಾದಿಗಳ ಗುಂಪೊಂದು ಟೊರೊಂಟೊದಲ್ಲಿರುವ (Toronto) ಹಿಂದೂ ದೇವಾಲಯವನ್ನು (Hindu Temple) ವಿರೂಪಗೊಳಿಸಿರುವ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ.
ಟೊರೊಂಟೊದ ಬಿಎಪಿಎಸ್ ಸ್ವಾಮಿನಾರಾಯಣ ಮಂದಿರದಲ್ಲಿ ಈ ಘಟನೆ ನಡೆದಿದೆ. ಭಾರತ-ವಿರೋಧಿ ಗೀಚುಬರಹದ ಮೂಲಕ ಪ್ರಮುಖ ಹಿಂದೂ ದೇವಾಲಯವನ್ನು ವಿರೂಪಗೊಳಿಸಲಾಗಿದೆ. ಇದನ್ನು ಭಾರತೀಯ ಮಿಷನ್ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್; ಇಬ್ಬರು ಉಗ್ರರು ಹತ್ಯೆ
Advertisement
Advertisement
ಭಾರತೀಯ ಹೈಕಮಿಷನ್ ಬುಧವಾರ ಟ್ವೀಟ್ ಮಾಡಿ ಖಂಡನೆ ವ್ಯಕ್ತಪಡಿಸಿದೆ. ಭಾರತ ವಿರೋಧಿ ಗೀಚುಬರಹದ ಮೂಲಕ BAPS ಸ್ವಾಮಿನಾರಾಯಣ ಮಂದಿರ ವಿರೂಪಗೊಳಿಸುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಘಟನೆಯ ಬಗ್ಗೆ ತನಿಖೆ ನಡೆಸಲು ಮತ್ತು ಅಪರಾಧಿಗಳ ಮೇಲೆ ತ್ವರಿತ ಕ್ರಮ ಕೈಗೊಳ್ಳಲು ಕೆನಡಾದ ಅಧಿಕಾರಿಗಳಿಗೆ ವಿನಂತಿಸಿದ್ದೇವೆ ಎಂದು ತಿಳಿಸಿದೆ.
Advertisement
Advertisement
ಕೆನಡಾದ ಸಂಸತ್ ಸದಸ್ಯ ಚಂದ್ರ ಆರ್ಯ (Chandra Arya) ಟ್ವೀಟ್ ಮಾಡಿ, ಕೆನಡಾದ ಖಲಿಸ್ತಾನಿ ತೀವ್ರವಾದಿಗಳಿಂದ ಟೊರೊಂಟೊ ಬಿಎಪಿಎಸ್ ಸ್ವಾಮಿನಾರಾಯಣ ಮಂದಿರ ವಿರೂಪಗೊಳಿಸಿರುವುದನ್ನು ಎಲ್ಲರೂ ಖಂಡಿಸಬೇಕು. ಇದು ಕೇವಲ ಒಂದು ಘಟನೆಯಲ್ಲ. ಕೆನಡಾದ ಹಿಂದೂ ದೇವಾಲಯಗಳು ಇತ್ತೀಚಿನ ದಿನಗಳಲ್ಲಿ ಈ ರೀತಿಯ ದಾಳಿಗೆ ಗುರಿಯಾಗುತ್ತಿವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಸಂಚರಿಸುತ್ತಿದ್ದ ಕಾರು ಅಪಘಾತ