ನ್ಯೂಯಾರ್ಕ್: ಅಮೆರಿಕಾದ ಕ್ಯಾಲಿಫೋರ್ನಿಯಾದ (California) ನೆವಾರ್ಕ್ ಸಿಟಿಯಲ್ಲಿ (Newark City) ಹಿಂದೂ ದೇವಾಲಯದ ಗೋಡೆಯಲ್ಲಿ ಖಲಿಸ್ತಾನಿ ಪರ ಘೋಷಣೆಗಳನ್ನು ಬರೆಯಲಾಗಿದೆ. ಈ ಕುರಿತು ಇದೀಗ ಭಾರೀ ಖಂಡನೆ ವ್ಯಕ್ತವಾಗುತ್ತಿದೆ.
ಹಿಂದೂ ಅಮೇರಿಕನ್ ಫೌಂಡೇಶನ್ ತನ್ನ ಎಕ್ಸ್ ಖಾತೆಯಲ್ಲಿ, ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ (Swaminarayan Mandir Vasana Sanstha) ಗೋಡೆಗಳ ಮೇಲೆ ಘೋಷಣೆಗಳನ್ನು (Pro-Khalistani Slogans) ಬರೆದಿರುವ ಫೋಟೋಗಳನ್ನು ಹಂಚಿಕೊಂಡಿದೆ. ಫೋಟೋದಲ್ಲಿ, ದೇಗುಲದ ಗೋಡೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಭಾರತದ (India) ವಿರುದ್ಧ ದ್ವೇಷಪೂರಿತ ಬರಹಗಳನ್ನು ಬರೆಯಲಾಗಿದೆ.
Advertisement
Advertisement
ಘಟನೆಯ ಕುರಿತು ಸಂಪೂರ್ಣ ತನಿಖೆಯಾಗಬೇಕು ಎಂದು ಪ್ರತಿಷ್ಠಾನ ಒತ್ತಾಯಿಸಿದೆ. ಅಲ್ಲದೆ ಈ ಕುರಿತು ನೆವಾರ್ಕ್ ಪೊಲೀಸ್ ಇಲಾಖೆ ಹಾಗೂ ನ್ಯಾಯಾಂಗ ನಾಗರಿಕ ಹಕ್ಕುಗಳ ವಿಭಾಗಕ್ಕೆ ದೂರು ನೀಡಿದೆ. ಇದನ್ನೂ ಓದಿ: JDU ಮುಖ್ಯಸ್ಥರನ್ನು ಕಿತ್ತೆಸೆದು ತಾವೇ ಹುದ್ದೆ ಅಲಂಕರಿಸುತ್ತಾರಾ ಬಿಹಾರ ಸಿಎಂ?
Advertisement
ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ ಗೋಡೆಯ ಮೇಲೆ ಬರೆದಿರುವ ದ್ಷೇಷದ ಬರಹಗಳನ್ನು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಕಾನ್ಸುಲೇಟ್ ಖಂಡಿಸಿದೆ. ಇದನ್ನು ಬರೆದಿರುವ ಕಿಡಿಗೇಡಿಗಳ ವಿರುದ್ಧ ತ್ವರಿತ ತನಿಖೆ ಮತ್ತು ಕಠಿಣ ಕ್ರಮಕ್ಕಾಗಿ ಯುಎಸ್ ಅಧಿಕಾರಿಗಳಿಗೆ ಒತ್ತಡ ಹೇರಿದೆ.
Advertisement
ಕ್ಯಾಲಿಫೋರ್ನಿಯಾದ ನೆವಾರ್ಕ್ನಲ್ಲಿರುವ ಎಸ್ಎಂವಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರದ ಗೋಡೆಯಲ್ಲಿ ಭಾರತ ವಿರೋಧಿ ಬರಹದ ಮೂಲಕ ವಿರೂಪಗೊಳಿಸಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ಘಟನೆಯು ಭಾರತೀಯ ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ತಂದಿದೆ. ಈ ಕುರಿತು ಶೀಘ್ರವೇ ತನಿಖೆ ನಡೆಸಿ ಹಾಗೂ ಈ ಕೃತ್ಯ ಎಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದಾಗಿ ನಾವು ಒತ್ತಾಯಿಸಿದ್ದೇವೆ ಎಂದು ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ಕಾನ್ಸುಲೇಟ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಅಮೇರಿಕಾದಲ್ಲಿ ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ್ದು ಇದೇ ಮೊದಲಲ್ಲ. ಈ ಹಿಂದೆಯೂ ಇಂತಹ ಘಟನೆಗಳು ದೇಶ ಹಾಗೂ ನೆರೆಯ ಕೆನಡಾದಲ್ಲಿಯೂ ನಡೆದಿವೆ.