ಬೆಳಗಾವಿ: ಕರ್ನಾಟಕದಲ್ಲಿ 2,500 ಸಾವಿರ ವರ್ಷಗಳಿಂದ ಕನ್ನಡ ನಾಡಿನಲ್ಲಿ, ಕನ್ನಡ ಉಳಿಸುವ ಬೆಳೆಸುವ ಕೆಲಸ ಅನೇಕ ಮಹನೀಯರು ಮಾಡಿದ್ದಾರೆ. ಸೂರ್ಯ-ಚಂದ್ರ ಇರುವವರೆಗೂ ಕನ್ನಡ ಭಾಷೆ ಇರುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭೂಮಿ ಮೇಲೆ ಜನರು ಇರೋವರೆಗೂ ಕನ್ನಡ ಭಾಷೆ ಇರುತ್ತದೆ. ನಮ್ಮನ್ನು ಪರಕೀಯರು 600 ವರ್ಷಗಳ ಕಾಲ ಆಳಿದ್ದಾರೆ. ಕನ್ನಡ ಭಾಷೆಗೆ ಯಾರ ಜಟಾಪಟಿನೂ ಅಗತ್ಯತೆ ಇಲ್ಲ. ದೇಶದಲ್ಲಿ ಆಯಾ ಪ್ರದೇಶ, ರಾಜ್ಯಗಳಲ್ಲಿ ಮಾತೃಭಾಷೆಗಳಿರುತ್ತವೆ. ಅದೇ ರೀತಿ ಕರ್ನಾಟಕದಲ್ಲೂ ಕನ್ನಡ ಮಾತೃಭಾಷೆ ಇದೆ ಎಂದರು. ಇದನ್ನೂ ಓದಿ: 90 ವರ್ಷದ ಬುದ್ಧಿಮಾಂದ್ಯ ತಾಯಿ, ಮಗನನ್ನು ಗುರುತಿಸುವ ಭಾವನಾತ್ಮಕ ವೀಡಿಯೋ ವೈರಲ್
Advertisement
Advertisement
ಕನ್ನಡ ಭಾಷೆ ನಮಗೆ ತಾಯಿ ಸಮಾನವಾಗಿದೆ. ಹೀಗಾಗಿ 2,500 ಸಾವಿರ ವರ್ಷದಿಂದ ಈ ನಾಡಿನಲ್ಲಿ ಕನ್ನಡ ಉಳಿಸುವ ಬೆಳೆಸುವ ಕೆಲಸ ಅನೇಕರು ಮಾಡಿದ್ದಾರೆ. ಸೂರ್ಯ-ಚಂದ್ರ ಇರುವವರೆಗೂ ಕನ್ನಡ ಭಾಷೆ ಇರುತ್ತದೆ. ಭೂಮಿ ಮೇಲೆ ಜನರು ಇರೋವರೆಗೂ ಕನ್ನಡ ಭಾಷೆ ಇರುತ್ತದೆ ಎಂದು ತಿಳಿಸಿದರು.
Advertisement
Advertisement
ಬ್ರಿಟಿಷರು, ಮುಸ್ಲಿಮರು, ಪೋರ್ಚುಗೀಸರು ಸೇರಿ ಪರಕೀಯರು ನಮ್ಮನ್ನು ಆಳಿದ್ದಾರೆ. ಆದರೂ ಸಹ ಕನ್ನಡ ಭಾಷೆ ನಶಿಸಿ ಹೋಗಿಲ್ಲ, ಹಿಂದೂ ಧರ್ಮ ನಶಿಸಿ ಹೋಗಿಲ್ಲ. ಹಿಂದೂ ಧರ್ಮ ಮತ್ತು ಮಾತೃ ಭಾಷೆ ಶಾಶ್ವತವಾಗಿ ಇರುತ್ತದೆ ಎಂದು ನುಡಿದರು. ಇದನ್ನೂ ಓದಿ: ಹಾಡಹಗಲೇ ಅತ್ಯಾಚಾರ – ‘ಕಾಲಿಗೆ ಬೀಳುತ್ತೇನೆ ನನ್ನನ್ನು ಬಿಟ್ಟು ಬಿಡಿ’ ಎಂದ್ರೂ ಬಿಡದ ಪಾಪಿಗಳು