ಬೆಂಗಳೂರು: ಹಿಜಬ್‍ಗೆ ಆಗ್ರಹಿಸಿ ಕರ್ನಾಟಕ ಬಂದ್ ನಡೆಸಿದ ಬಳಿಕ ದೇವಾಲಯಗಳಲ್ಲಿ ಅನ್ಯಧರ್ಮದ ವ್ಯಾಪಾರಿಗಳನ್ನು ನಿರ್ಬಂಧಿಸಲಾಯ್ತು, ಬಳಿಕ ಹಲಾಲ್‍ಗೆ ಜಟ್ಕಾ ಕಟ್ ಬಂತು. ಈಗ ಡ್ರೈವರ್‌ಗಳಿಗೂ ಬಿಸಿ ತಟ್ಟಿದೆ. ಹಿಂದೂಗಳು, ಹಿಂದೂಗಳ ವಾಹನದಲ್ಲೇ ದೇವಾಲಯಕ್ಕೆ ಹೋಗಲಿ ಎಂದು ಭಾರತ್ ರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಬಂಗೇರಾ ಹೊಸ ಅಭಿಯಾನಕ್ಕೆ ಕರೆ ಕೊಟ್ಟಿದ್ದಾರೆ.
Advertisement
ಹಿಂದೂಗಳು, ಹಿಂದೂಗಳ ವಾಹನದಲ್ಲೇ ದೇವಾಲಯಕ್ಕೆ ಹೋಗಬೇಕು. ಈಗಾಗಲೇ ಹಿಂದೂ ಸಮಾಜ ಒಂದಾಗಿ ಸಾಕಷ್ಟು ಅಭಿಯಾನ ಮಾಡಿ ಯಶಸ್ವಿಯಾಗಿದೆ. ನಾವು ಮತ್ತೊಂದು ಹೊಸ ಅಭಿಯಾನ ಆರಂಭ ಮಾಡಬೇಕಿದೆ ಎಂದು ಹೇಳಿ ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: 2 ಕೋಟಿ ದರೋಡೆ ಕೇಸ್ – ಪತ್ನಿ ಸಾಲ ತೀರಿಸಲು ಕನ್ನ ಹಾಕಿದ ಇಬ್ಬರು ಪತ್ನಿಯರ ಮುದ್ದಿನ ಗಂಡ
Advertisement
Advertisement
ಯಾರು ನಮ್ಮ ದೇವರನ್ನು ನಂಬುವುದಿಲ್ಲ. ನಮ್ಮ ದೇಶದ ಕಾನೂನಿಗೆ ಬೆಲೆ ಕೊಡುವುದಿಲ್ಲವೋ ಅವರ ವಾಹನದಲ್ಲಿ ಹೋಗಿ ನಮ್ಮ ದೇವರಿಗೆ ಹರಕೆ ಪೂಜೆ ಸಲ್ಲಿಸುತ್ತಿದ್ದೇವೆ. ಆದರೆ ಇಂದಿನಿಂದ ಹಿಂದೂ ಮಾಲೀಕರು ಮತ್ತು ಡ್ರೈವರ್‌ಗಳ ಜೊತೆಯಲ್ಲೇ ನಮ್ಮ ಧಾರ್ಮಿಕ ಕ್ಷೇತ್ರಕ್ಕೆ ಹೋಗಬೇಕು. ಈ ಮೂಲಕ ಹಿಂದೂ ಚಾಲಕರಿಗೆ ನಾವು ಆರ್ಥಿಕವಾಗಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ.
Advertisement
ಗೋಮಾಂಸ ತಿನ್ನುವ ಚಾಲಕರೊಂದಿಗೆ ಧರ್ಮ ಕ್ಷೇತ್ರಕ್ಕೆ ಹೋಗುವ ಬದಲು, ನಮ್ಮ ಹಿಂದೂ ಸಮಾಜದ ಚಾಲಕರ ವಾಹನದಲ್ಲಿ ಯಾತ್ರೆಗೆ ಹೋಗೋಣ. ಹಿಂದೂ ಸಮಾಜದ ಚಾಲಕರು ಈಗಾಗಲೇ ಬೀದಿಗೆ ಬಿದ್ದಿದ್ದಾರೆ. ಇದರಿಂದ ನಮ್ಮ ಸಮಾಜದ ಚಾಲಕರು ಆರ್ಥಿಕ ಸಹಾಯ ಮಾಡೋಣ. ಈ ಅಭಿಯಾನಕ್ಕೆ ಹಿಂದೂ ಸಂಘಟನೆಗಳು ಬೆಂಬಲ ನೀಡಿ ಯಶಸ್ವಿಗೊಳಿಸಬೇಕು ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಮದ್ಯದ ಬಾಟಲಿಯಿಂದ ಸಿಕ್ಕಿ ಬಿದ್ರು 2 ಕೋಟಿ ಕದ್ದ ಖದೀಮರು