ಬ್ರಾಂಪ್ಟನ್: ಬ್ರಾಂಪ್ಟನ್‌ನಲ್ಲಿರುವ (Brompton) ಹಿಂದೂ ಸಭಾ ಮಂದಿರದ (Hindu Sabha Mandir) ಹೊರ ಭಾಗದಲ್ಲಿ ಖಲಿಸ್ತಾನಿ ಪರ ಬೆಂಬಲಿಗರಿಂದ (Khalistan Suppoters) ಹಿಂದೂಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಹಿಂದೂಗಳ ಒಕ್ಕೂಟ (CoHNA) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಸಾವಿರಾರು ಕೆನಡಾದ ಹಿಂದೂಗಳು ಒಗ್ಗಟ್ಟಿನಿಂದ ಮೆರವಣಿಗೆ ನಡೆಸಿದರು.
ಪ್ರತಿಭಟನಾಕಾರರು ಕೆನಡಾ ಮತ್ತು ಭಾರತದ ಧ್ವಜಗಳನ್ನು ಹಿಡಿದು ಮೆರವಣಿಗೆ ನಡೆಸಿದರು. ಮೆರವಣಿಗೆ ಉದ್ದಕ್ಕೂ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದರು. ಇದೇ ವೇಳೆ ಖಲಿಸ್ತಾನ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಸುಮಾರು 20 ವರ್ಷಗಳಿಂದ ಕೆನಡಾದಲ್ಲಿ ಹಿಂದೂಗಳು ಸತತವಾಗಿ ತಾರತಮ್ಯಕ್ಕೆ ಒಳಗಾಗುತ್ತಿದ್ದಾರೆ ಎಂದು ಕೆಲವು ಪ್ರತಿಭಟನಾಕಾರರು ಆರೋಪಿಸಿದರು. ಇದನ್ನೂ ಓದಿ: ಮುಡಾ ಕೇಸ್ ಸಿದ್ದರಾಮಯ್ಯ ವಿರುದ್ಧ ನಡೆಯುತ್ತಿರೋ ಷಡ್ಯಂತ್ರ: ಮಹದೇವಪ್ಪ
Advertisement
Advertisement
ಹಿಂದೂ ಕೆನಡಿಯನ್ನರು ಕೆನಡಾಕ್ಕೆ ತುಂಬಾ ನಿಷ್ಠರಾಗಿದ್ದಾರೆ. ಹಿಂದೂ ಕೆನಡಿಯನ್ನರ ವಿರುದ್ಧ ನಡೆಯುತ್ತಿರುವುದು ತಪ್ಪು. ಎಲ್ಲಾ ರಾಜಕಾರಣಿಗಳು ಪರಿಸ್ಥಿತಿ ಅರ್ಥ ಮಾಡಿಕೊಳ್ಳುವ ಸಮಯ ಬಂದಿದೆ. ಕೆನಡಾ ಇಲ್ಲಿರುವ ಹಿಂದೂಗಳನ್ನು ಚೆನ್ನಾಗಿ ನಡೆಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ. ನಮಗೆ ಭಾರತ ಬೇಕು ಮತ್ತು ಕೆನಡಾ ಸಂಬಂಧಗಳನ್ನು ಬಲಪಡಿಸಬೇಕು ಎಂದು ಮತ್ತೋರ್ವ ಪ್ರತಿಭಟನಾಕಾರರು ಆಗ್ರಹಿಸಿದರು. ಇದನ್ನೂ ಓದಿ: ಬೆಂಗಳೂರಲ್ಲಿ ರಸ್ತೆ ದಾಟುವಾಗ ಬೆನ್ಜ್ ಕಾರು ಡಿಕ್ಕಿಯಾಗಿ ಟೆಕ್ಕಿ ಸಾವು
Advertisement
ಹಿಂದೂ ಸಭಾ ದೇವಾಲಯದ ಆವರಣದಲ್ಲಿ ಭಕ್ತರ ಮೇಲೆ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ದಾಳಿ ಮಾಡಿದ್ದಾರೆ. ಈ ದೇವಾಲಯವು ಟೊರೊಂಟೊದಿಂದ ಸುಮಾರು 50 ಕಿ.ಮೀ ದೂರದಲ್ಲಿದೆ. ದಾಳಿಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಖಲಿಸ್ತಾನಿ ಧ್ವಜ ಹಿಡಿದಿರುವುದು, ಭಕ್ತರನ್ನು ನಿಂದಿಸುತ್ತಾ ಹಲ್ಲೆ ನಡೆಸುತ್ತಿರುವುದು ವೀಡಿಯೋದಲ್ಲಿದೆ. ಇದನ್ನೂ ಓದಿ: ಬೆಳಗಾವಿ| ತಹಶೀಲ್ದಾರ್ ಕಚೇರಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ
Advertisement
ಹಿಂದೂ ದೇವಾಲಯದಲ್ಲಿ ಹಿಂದೂಗಳ ಮೇಲಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಖಂಡಿಸಿದ್ದರು. ಇದನ್ನು ಉದ್ದೇಶಪೂರ್ವಕ ಕೃತ್ಯ ಎಂದು ಕರೆದಿದ್ದು, ಭಾರತೀಯ ರಾಯಭಾರಿಗಳನ್ನು ಬೆದರಿಸುವ ಪ್ರಯತ್ನ ಎಂದು ಮೋದಿ ಟೀಕಿಸಿದ್ದರು. ಇದನ್ನೂ ಓದಿ: ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಇಲ್ಲವೇ 5 ಕೋಟಿ ಕೊಡಿ: ಸಲ್ಮಾನ್ ಖಾನ್‌ಗೆ ಮತ್ತೊಂದು ಬೆದರಿಕೆ