ಮುಂಬೈ: ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಿದ ಆರೋಪ ಮೇರೆಗೆ ಸಾಮಾಜಿಕ ಜಾಲತಾಣದ ಪ್ರಭಾವಿ ಮತ್ತು ಯೂಟ್ಯೂಬರ್ ಹಿಂದೂಸ್ತಾನಿ ಭಾವು ಅಲಿಯಾಸ್ ವಿಕಾಸ್ ಫಾಟಕ್ ಅವರನ್ನು ಮುಂಬೈನಲ್ಲಿ ಧಾರಾವಿ ಪೊಲೀಸರು ಬಂಧಿಸಿದ್ದಾರೆ.
ಸೋಮವಾರ 10 ಮತ್ತು 12ನೇ ತರಗತಿಗಳ ಆಫ್‍ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಲು ಮಹಾರಾಷ್ಟ್ರ ಶಿಕ್ಷಣ ಸಚಿವ ವರ್ಷಾ ಗಾಯಕ್‍ವಾಡ್ ಅವರ ನಿವಾಸದ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ವೀಡಿಯೋವನ್ನು ಭಾವು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದರು. ಇದರಿಂದ ಅವರು ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪ ಮಾಡಲಾಗಿದೆ.
Advertisement
Advertisement
ಈ ಪ್ರಕರಣದಲ್ಲಿ ಧಾರಾವಿ ಪೊಲೀಸರು ಇಕ್ರಾರ್ ಖಾನ್ ವಖಾರ್ ಖಾನ್ ಎಂಬಾತನನ್ನೂ ಬಂಧಿಸಿದ್ದಾರೆ. ನೂರಾರು ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಅಶೋಕ್ ಮಿಲ್ ನಾಕಾದಲ್ಲಿ ಪ್ರತಿಭಟನೆ ನಡೆಸಿದ್ದರು. ಸಚಿವರ ನಿವಾಸದ ಬಳಿ ತೆರಳದಂತೆ ಪೆÇಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯ ಟೆನ್ಷನ್ ಫ್ರೀ – ಮೂರು ದಿನ ರೆಸಾರ್ಟ್‌ನಲ್ಲಿ ವಿಶ್ರಾಂತಿ
Advertisement
ಪ್ರಾಥಮಿಕ ತನಿಖೆಯ ಪ್ರಕಾರ, ಯೂಟ್ಯೂಬರ್ ಹಿಂದೂಸ್ತಾನಿ ಭಾವು ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಿದ್ದರು ಎಂದು ತಿಳಿಸಲಾಗಿದೆ. ಇದನ್ನೂ ಓದಿ: ದಾರಿ ತಪ್ಪಿದ ಸಂಸದ ಡಿಕೆ ಸುರೇಶ್: ಸುರೇಶ್ ಕುಮಾರ್ ತಿರುಗೇಟು