ನವದೆಹಲಿ: ಸಾವರ್ಕರ್ (Savarkar) ಬ್ರಿಟಿಷರಲ್ಲಿ ಕ್ಷಮೆಯಾಚಿಸಿದ್ದಾರೆ ಎಂಬುದನ್ನು ಸಾಬೀತುಪಡಿಸಿ ಎಂದು ರಾಹುಲ್ ಗಾಂಧಿಗೆ (Rahul Gandhi) ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ (Ranjit Savarkar) ಎಂದು ಸವಾಲು ಹಾಕಿದರು.
ರಾಹುಲ್ ಗಾಂಧಿ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಹೇಳಿಕೆಗಳು ಬಾಲಿಶವಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ರಾಹುಲ್ ಗಾಂಧಿ ಅವರು ಸಾವರ್ಕರ್ ಅಲ್ಲದ ಕಾರಣ ಕ್ಷಮೆ ಕೇಳುವುದಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೇ ಬ್ರಿಟಿಷರಲ್ಲಿ ಸಾವರ್ಕರ್ ಕ್ಷಮೆಯಾಚಿಸಿದ್ದಾರೆ ಎನ್ನುವುದರ ಕುರಿತು ದಾಖಲೆಗಳನ್ನು ತೋರಿಸಲು ರಾಹುಲ್ ಗಾಂಧಿಗೆ ಸವಾಲು ಹಾಕಿದರು.
ರಾಜಕೀಯ ಪ್ರಚಾರಕ್ಕಾಗಿ ದೇಶಭಕ್ತರ ಹೆಸರನ್ನು ಬಳಸುವುದು ತಪ್ಪು ಹಾಗೂ ಶೋಚನೀಯವಾಗಿದೆ. ಈ ರೀತಿ ಹೇಳಿಕೆಗಳನ್ನು ನೀಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ನರೇಗಾ ಬಿಲ್ ಪಾವತಿಗೆ ಗ್ರಾ.ಪಂ ಅಧಿಕಾರಿಯಿಂದ ಲಂಚಕ್ಕೆ ಬೇಡಿಕೆ- ಹಣವಿಲ್ಲದೆ ಎತ್ತುಗಳನ್ನು ನೀಡಲು ಮುಂದಾದ ರೈತ
ಲೋಕಸಭೆಯಿಂದ ಅನರ್ಹಗೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ನನ್ನ ಹೆಸರು ಸಾವರ್ಕರ್ ಅಲ್ಲ, ನನ್ನ ಹೆಸರು ಗಾಂಧಿ. ಗಾಂಧಿ ಯಾರ ಬಳಿಯೂ ಕ್ಷಮೆ ಕೇಳುವುದಿಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದರು. ಇದನ್ನೂ ಓದಿ: ಮೋದಿ ಫೋಟೋ ಹರಿದಿದ್ದ ಶಾಸಕನಿಗೆ 99 ರೂ. ದಂಡ