ಹಿಂದುತ್ವ ಸಂಸ್ಕೃತಿಯೇ ಹೊರತು ಅವ್ಯವಸ್ಥೆಯಲ್ಲ: ಶಿವಸೇನಾ

Public TV
2 Min Read
Uddhav Thackeray

ಮುಂಬೈ: ಹನುಮಾನ್ ಚಾಲೀಸಾ ಪಠಿಸುವ ವಿಚಾರದಲ್ಲಿ ಈಗಾಗಲೇ ಮಹಾರಾಷ್ಟ್ರದಲ್ಲಿ ರಾಜಕೀಯ ಗದ್ದಲ ಶುರುವಾಗಿದೆ. ಈ ಬೆನ್ನಲ್ಲೇ ಶಿವಸೇನಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಿಂದುತ್ವ ಸಂಸ್ಕೃತಿಯೇ ಹೊರತು ಅವ್ಯವಸ್ಥೆಯಲ್ಲ ಎಂದು ಹೇಳಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸ ಮಾತೋಶ್ರೀಯ ಹೊರಗೆ ಹನುಮಾನ್ ಚಾಲೀಸಾ ಪಠಿಸುವಂತೆ ಸಂಸದೆ ನವನೀತ್ ರಾಣಾ ಮತ್ತು ಅವರ ಶಾಸಕ ಪತಿ ರವಿ ರಾಣಾ ಅವರು ನೀಡಿದ ಕರೆಯನ್ನು ಶಿವಸೇನಾ ತನ್ನ ಮುಖವಾಣಿ ಸಾಮ್ನಾದಲ್ಲಿ ಖಂಡಿಸಿದೆ. ಇದನ್ನೂ ಓದಿ: ಶ್ರೀರಾಮನನ್ನು ಅವಹೇಳನ ಮಾಡಿದ್ದ ಪ್ರಾಧ್ಯಾಪಕಿ ವಜಾ

mumbai - cuple

ರಾಣಾ ದಂಪತಿ ತಮ್ಮ ಲಾಬಿಗೋಸ್ಕರ ನಗರದ ವಾತಾವರಣವನ್ನು ಹಾಳು ಮಾಡಲು ಬಯಸಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಮಹಾರಾಷ್ಟ್ರದಲ್ಲಿ ಹಿಂದುತ್ವ ಉತ್ತಮವಾಗಿದೆ. ರಾಜ್ಯದಲ್ಲಿ ಹನುಮಾನ್ ಚಾಲೀಸಾ ಪಠಿಸುವುದಕ್ಕೆ ಯಾವುದೇ ನಿರ್ಬಂಧವಿಲ್ಲ, ಆದರೆ ಮಾತೋಶ್ರೀಯ ಹೊರಗೆ ಪಠಿಸಬೇಕೆಂಬ ಒತ್ತಾಯ ಏಕೆ? ಎಂದು ಶಿವಸೇನೆ ಪ್ರಶ್ನಿಸಿದೆ.

ಬಿಜೆಪಿಯು ಅನುಸರಿಸುತ್ತಿರುವ ಅವ್ಯವಸ್ಥೆ ಬೆಂಬಲಿಸಲಾಗುವುದಿಲ್ಲ. ಏಕೆಂದರೆ ಹಿಂದುತ್ವವು ಒಂದು ಸಂಸ್ಕೃತಿಯಾಗಿದೆಯೇ ಹೊರತು ಅವ್ಯವಸ್ಥೆಯಲ್ಲ ಎಂದು ಹೇಳಿದೆ. ಇದನ್ನೂ ಓದಿ: ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು: ಡಾ.ಕೆ.ಸುಧಾಕರ್

HANUMAN CHALISA PROTEST

ಈ ಬೆನ್ನಲ್ಲೇ ರಾಣಾ ದಂಪತಿ ವಿರುದ್ಧ ಆರೋಪಿಸಿರುವ ಶಿವಸೇನಾ, ಮೀಸಲು ಕ್ಷೇತ್ರವಾದ ಅಮರಾವತಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಾಗ ನವನೀತ್ ರಾಣಾ ನಕಲಿ ಜಾತಿ ಪ್ರಮಾಣಪತ್ರ ನೀಡಿದ್ದಾರೆ. ಇಂತಹ ನಕಲಿ ವ್ಯಕ್ತಿಯ ಹೆಗಲ ಮೇಲೆ ಕುಳಿತು ಬಿಜೆಪಿ ಹನುಮಾನ್ ಚಾಲೀಸಾ ಪಠಿಸಲು ಬಯಸಿದರೆ, ಇದು ರಾಮ ಮತ್ತು ಹನುಮಂತನಿಗೆ ಮಾಡಿದ ಅವಮಾನವಾಗುತ್ತದೆ ಎಂದು ಕುಟುಕಿದೆ.

ನವನೀತ್ ರಾಣಾ ಅವರು ಕಾಂಗ್ರೆಸ್ ಮತ್ತು ಎನ್‌ಸಿಪಿ ಯಂತಹ ಜಾತ್ಯತೀತ ಪಕ್ಷಗಳ ಸಹಾಯದಿಂದ 2019ರ ಚುನಾವಣೆಯಲ್ಲಿ ಗೆದ್ದಿದ್ದರು. ಆದರೆ ಈಗ ಬಿಜೆಪಿ ಪಾಳೆಯವನ್ನು ಪ್ರವೇಶಿಸಿದ್ದಾರೆ ಎಂದು ಶಿವಸೇನಾ ಹೇಳಿಕೊಂಡಿದೆ. ಇದನ್ನೂ ಓದಿ: ಸೂರ್ಯ- ಚಂದ್ರ ಇರೋವರೆಗೂ ಸಂವಿಧಾನ ಬದಲಾವಣೆ ಅಸಾಧ್ಯ: ಆನಂದ್ ಸಿಂಗ್

SHIVASENA PROTEST

ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ರಾಣಾ ದಂಪತಿಯನ್ನು ಮುಂಬೈ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅವರನ್ನು ಭಾನುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಠಾಕ್ರೆ ವಿರುದ್ಧ ಹೇಳಿಕೆ ನೀಡಿದ್ದಾಕ್ಕಾಗಿ ಸರ್ಕಾರದ ಸರ್ಕಾರದ ನೀತಿಗೆ ವಿರುದ್ಧವಾಗಿ ಸವಾಲು ಹಾಕಿರುವುದಕ್ಕೆ ದೇಶದ್ರೋಹದ ಆರೋಪದ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *