ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Double Murder in Bengaluru) ವೈಯಕ್ತಿಕ ದ್ವೇಷದ ಕಾರಣದಿಂದ ಮಂಗಳವಾರ ನಡೆದಿದ್ದ ಇಬ್ಬರು ಉದ್ಯಮಿಗಳ ಕೊಲೆ ಪ್ರಕರಣಕ್ಕೆ ಬಿಜೆಪಿ (BJP) ನಾಯಕರು ಬೇರೆಯದ್ದೇ ಆಯಾಮ ನೀಡಲು ಪ್ರಯತ್ನಿಸಿದ್ದಾರೆ. ಈ ಜೋಡಿ ಕೊಲೆಯಲ್ಲಿ ರಾಷ್ಟ್ರವಾದವನ್ನು, ಹಿಂದುತ್ವವನ್ನು ಎಳೆತಂದಿದ್ದಾರೆ. ಇದನ್ನೂ ಓದಿ: ಡಬಲ್ ಮರ್ಡರ್ ಬಳಿಕ ಪಬ್ಲಿಕ್ ಟಿವಿ ಸುದ್ದಿಯ ಸ್ಟೇಟಸ್ – ವೃತ್ತಿ ವೈಷಮ್ಯವೇ ಕೊಲೆಗೆ ಕಾರಣ?
Hindu Seer brutally murdered in Bengaluru.#Paneendra_subramanyam no more.
Alarming situation in #Karnataka has arrived due to a Government that idolises tyrant #TipuSultan.
Everyone should strongly protest !#CongressHaiToKillingsHai pic.twitter.com/IuybCWjEo4
— Sunil Deodhar (@Sunil_Deodhar) July 11, 2023
Advertisement
ರಾಜ್ಯದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದ್ಮೇಲೆ ಟಾರ್ಗೆಟ್ ಕಿಲ್ಲಿಂಗ್ ನಡೀತಿದೆ ಎಂದು ಬಿಜೆಪಿಯ ಸಿಟಿ ರವಿ (CT Ravi) ಆರೋಪಿಸಿದ್ದಾರೆ. ಫಣೀಂದ್ರ, ವಿನುಕುಮಾರ್ ಹತ್ಯೆ ಮೇಲ್ನೋಟಕ್ಕೆ ವೈಯಕ್ತಿಕ ಅನಿಸುತ್ತದೆ. ಆದರೆ ಇವರೆಲ್ಲರೂ ರಾಷ್ಟ್ರೀಯ ಚಿಂತನೆಯಲ್ಲಿ ಗುರುತಿಸಿಕೊಂಡ ಜನ. ಹಾಗಿದ್ದಾಗ ಸರಣಿ ಹತ್ಯೆಯ ಹಿಂದೆ ಪಿತೂರಿ ಇದ್ಯಾ ಎಂಬ ಅನುಮಾನ ಕಾಡುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಡಬಲ್ ಮರ್ಡರ್ ಬಳಿಕ ಹೋಟೆಲ್ ರೂಂನಲ್ಲಿ ತಣ್ಣಗೆ ಎಣ್ಣೆ ಪಾರ್ಟಿ – ಫೆಲಿಕ್ಸ್ ಸೇರಿ ಮೂವರು ಲಾಕ್
Advertisement
Advertisement
ಸಿಟಿ ರವಿ ಮಾತ್ರವಲ್ಲ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನೀಲ್ ದಿಯೋಧರ್ ಕೂಡ ಟ್ವೀಟ್ ಮಾಡಿ, ಬೆಂಗಳೂರಲ್ಲಿ ಹಿಂದೂ ಶ್ರೀಗಳ ಹತ್ಯೆಯಾಗಿದೆ. ಟಿಪ್ಪು ಸಿದ್ದಾಂತಿಗಳಿಂದ ಕರ್ನಾಟಕಕ್ಕೆ ಅಪಾಯಕಾರಿ ಸ್ಥಿತಿ ಬಂದೊದಗಿದೆ ಎಂದು ಆರೋಪಿಸಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯ ಮೋಹನ್ ಗೌಡ, ಬೆಂಗಳೂರಲ್ಲಿ ಹಿಂದೂ ನಾಯಕನ ಹತ್ಯೆ ಆಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಜೈನಮುನಿ ಹಂತಕನ ಮನೆಯ ಮೂಕಪ್ರಾಣಿಗಳ ಪಾಲನೆ- ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ
Advertisement
ಈ ಬೆನ್ನಲ್ಲೇ ಬೆಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಕೊಲೆಯಾಗಿದೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ನೆಟ್ಟಿಗರಿಗೆ ಬೆಂಗಳೂರು ಪೊಲೀಸರು ವಾರ್ನಿಂಗ್ ನೀಡಿದ್ದಾರೆ. ಇಂತಹ ಸೂಕ್ಷ್ಮ ವಿಚಾರವನ್ನು ಹಂಚಿಕೊಳ್ಳುವಾಗ ಎಚ್ಚರಿಕೆ ಇಂದ ಇರಿ, ಈ ಪ್ರಕರಣದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ತನಿಖೆ ಮಾಡಲಾಗ್ತಿದೆ ಎಂದು ತಿಳಿಸಿದ್ದಾರೆ.
Web Stories