ಹಾವೇರಿ: ಯಸೀರ್ ಖಾನ್ ಪಠಾಣ್ (Yasir Khan Pathan) ರೌಡಿಶೀಟರ್ ಎಂದು ಅವರ ಪಕ್ಷದವರೇ ಮಾತಾಡಿದ್ದಾರೆ. ಅವರ ಪಕ್ಷದವರೇ ಸ್ಪಷ್ಟೀಕರಣ ಕೊಡಲಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavraj Bommai) ಹೇಳಿದ್ದಾರೆ.
ಶಿಗ್ಗಾಂವಿ ಉಪಚುನಾವಣೆ (Shiggoan By Election) ಕಾವು ದಿನದಿಂದ ದಿನಕ್ಕೆ ರಂಗುಪಡೆಯುತ್ತಿದೆ. ಶಿಗ್ಗಾಂವಿಯಲ್ಲಿ ಲಿಂಗಾಯತ ಪಂಚಮಸಾಲಿ ಮುಖಂಡರ ಮನೆಮನೆಗೆ ಭೇಟಿ ನೀಡಿ ಬಸವರಾಜ ಬೊಮ್ಮಾಯಿ ಮತಯಾಚನೆ ಮಾಡಿದ್ದಾರೆ. ಪುತ್ರ ಭರತ್ ಬೊಮ್ಮಾಯಿ ಬೆಂಬಲಿಸುವಂತೆ ಮನವಿ ಮಾಡುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಡಿ.6ಕ್ಕೆ ದಿಲ್ಜಿತ್ ಶೋ; ಅಕ್ರಮ ಟಿಕೆಟ್ ಮಾರಾಟ ಆರೋಪ – ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ED ದಾಳಿ
Advertisement
Advertisement
ಹಾವೇರಿಯಲ್ಲಿ (Haveri) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವ ಗ್ಯಾರಂಟಿನೂ ಕೈ ಹಿಡಿದಿಲ್ಲ, ಏನೂ ಹಿಡಿದಿಲ್ಲ. ನಾನು ಹೆಚ್ಚಿನ ಸಮಯ ಹಾವೇರಿ ಗದಗ ಲೋಕಸಭಾ ಕ್ಷೇತ್ರದಲ್ಲಿ ಇದ್ದ ಕಾರಣ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಿಗ್ಗಾಂವಿ ಕ್ಷೇತ್ರದಲ್ಲಿ ಸ್ವಲ್ಪ ಹೆಚ್ಚು ಕಡಿಮೆ ಆಗಿದೆ. ಈ ಎಲ್ಲಾ ವಿಚಾರ ನಮ್ಮ ಕಾರ್ಯಕರ್ತರಿಗೆ ಮನದಟ್ಟಾಗಿದೆ. ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆ ವಾತಾವರಣ ಇದೆ. ಕಾಂಗ್ರೆಸ್‌ನವರು ಕನಸು ಕಾಣುತ್ತಿದ್ದಾರೆ. ಅವರ ಕನಸು ನನಸಾಗಲ್ಲ ಎಂದರು. ಇದನ್ನೂ ಓದಿ: ಮದುವೆಯಾಗುವಂತೆ ಒತ್ತಾಯಿಸಿದ ಗರ್ಭಿಣಿ ಪ್ರೇಯಸಿಯನ್ನು ಹತ್ಯೆ ಮಾಡಿದ ಗೆಳೆಯ
Advertisement
ಶಿಗ್ಗಾಂವಿ ಕ್ಷೇತ್ರದಲ್ಲಿ ಬೊಮ್ಮಾಯಿ ಒಂದೇ ಒಂದು ಮನೆ ಕೊಟ್ಟಿಲ್ಲ ಎಂಬ ಸಚಿವ ಜಮೀರ್ ಅಹ್ಮದ್ ಹೇಳಿಕೆ ವಿಚಾರವಾಗಿ ಮಾತನಾಡಿ, ಇದು ಹಾಸ್ಯಾಸ್ಪದ ಅಷ್ಟೆ, ಹೋಗಿ ನೋಡಿಕೊಂಡು ಬರಲಿ. ಕಾಂಗ್ರೆಸ್ ನಾಯಕರ ಭಾಷಣ ಸುಳ್ಳಿನ ಕಂತೆ ಅಷ್ಟೆ. ನಾವು ಎಲ್ಲರೂ ಒಗ್ಗಟ್ಟಿನಲ್ಲಿದ್ದೇವೆ. ನನಗಿಂತ ಹೆಚ್ಚು ಬೆಂಬಲ ಭರತ್‌ಗೆ (Bharath Bommai) ಸಿಕ್ಕಿದೆ. ದೊಡ್ಡ ಪ್ರಮಾಣದಲ್ಲಿ ಎಲ್ಲಾ ಸಮುದಾಯದವರು ಭರತ್‌ಗೆ ಬೆಂಬಲ ವ್ಯಕ್ತಪಡಿಸ್ತಿದ್ದಾರೆ. ಹೆಚ್ಚು ಮತಗಳ ಅಂತರದಿಂದ ಭರತ್ ಗೆಲ್ಲುತ್ತಾನೆ. ಖಾದ್ರಿ ಮನವೊಲಿಕೆ ಆದರೆ ಅದು ನಮಗೇನೂ ಪರಿಣಾಮ ಬೀರಲ್ಲ ಎಂದು ಹೇಳಿದರು. ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನ ಭೇಟಿಯಾದ ಉಪರಾಷ್ಟ್ರಪತಿ
Advertisement
ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವರು, ಶಾಸಕರ ದಂಡೇ ಪ್ರಚಾರಕ್ಕೆ ಬರುವ ವಿಚಾರ ಕೇಳಿದಾಗ, ದಯವಿಟ್ಟು ಬರಲಿ ಬಂದರೆ ಸ್ವಾಗತ ಎಂದರು. ಇದನ್ನೂ ಓದಿ: ಉತ್ತರ ಪ್ರದೇಶ| ರೈಲು ಹಳಿಗಳ ಮೇಲೆ 6 ಕೆಜಿ ಮರದ ತುಂಡು ಇರಿಸಿ ಹಳಿ ತಪ್ಪಿಸಲು ಯತ್ನ