ರಾಮನಗರ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ರವರು (Nirmala Sitharaman) ಮಂಡನೆ ಮಾಡಿರೋದು ಐತಿಹಾಸಿಕ ಬಜೆಟ್. ಮಧ್ಯಮ ವರ್ಗಕ್ಕೆ ಅನುಕೂಲ ಆಗುವಂತೆ ನಿರ್ಣಯ ಮಾಡಿದ್ದಾರೆ ಎಂದು ಕೇಂದ್ರ ಬಜೆಟ್ ಬಗ್ಗೆ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಪ್ರತಿಕ್ರಿಯೆ ನೀಡಿದ್ದಾರೆ.
ರಾಮನಗರದಲ್ಲಿ (Ramanagara) ಮಾಧ್ಯಮಗಳ ಜೊತೆ ಮಾತನಾಡಿದ ಅವರು, 12 ಲಕ್ಷದ ವರೆಗೂ ತೆರಿಗೆ ವಿನಾಯಿತಿ ನೀಡಿರುವುದು ಖುಷಿಯ ವಿಚಾರ. ಮಧ್ಯಮ ವರ್ಗಕ್ಕೆ ಆರ್ಥಿಕ ಶಕ್ತಿ ತುಂಬುವ ಕೆಲಸ ಆಗಿದೆ. ಪ್ರಧಾನ ಮಂತ್ರಿಗಳ ಕನಸಿನಂತೆ ಮೇಕ್ ಇನ್ ಇಂಡಿಯಾಗೆ ಒತ್ತು ನೀಡಲಾಗಿದೆ ಎಂದರು. ಇದನ್ನೂ ಓದಿ: ಬಜೆಟ್ ಮಂಡನೆ ವೇಳೆ ನಿರ್ಮಲಾ ಉಲ್ಲೇಖಿಸಿದ ಕವಿತೆ ಬರೆದ ಗುರಜದ ವೆಂಕಟ ಅಪ್ಪರಾವ್ ಯಾರು ಗೊತ್ತಾ?
Advertisement
Advertisement
ಚನ್ನಪಟ್ಟಣ ಗೊಂಬೆ ಉದ್ಯಮಕ್ಕೆ ಪ್ರೋತ್ಸಾಹ ನೀಡಿರುವುದು ಸ್ವಾಗತಾರ್ಹ. ಬಜೆಟ್ ಬಗ್ಗೆ ಪರ-ವಿರೋಧ ಚರ್ಚೆ ಸಹಜ. ಆದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜ್ಯಕ್ಕೆ ಅನುದಾನ ಬರುವ ನಿರೀಕ್ಷೆ ಇದೆ. ದೇಶದ ಅಭಿವೃದ್ಧಿ ದೃಷ್ಟಿಯಿಂದ ಇದೊಂದು ಉತ್ತಮ ಬಜೆಟ್ ಎಂದು ತಿಳಿಸಿದರು. ಇದನ್ನೂ ಓದಿ: ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್ ಮಂಡಿಸಿದ ಕೇಂದ್ರ ಸರ್ಕಾರ: ಆರ್.ಅಶೋಕ್
Advertisement