-`ನಮ್ಮ ನೀರು ನಮ್ಮ ಹಕ್ಕು’ ಘೋಷಣೆಯಡಿ ರೈತರ ಹಿತ ರಕ್ಷಣೆಗೆ ಈ ತೀರ್ಮಾನ
-ಜಲಸಂಪನ್ಮೂಲ ಇಲಾಖೆಯ ಇತಿಹಾಸದಲ್ಲೇ ಅತ್ಯಂತ ಪ್ರಮುಖವಾದ ದಿನವಿದು
ಕೊಪ್ಪಳ/ಬಳ್ಳಾರಿ: ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.
ಕೊಪ್ಪಳ (Koppal) ಜಿಲ್ಲೆಯ ಮುನಿರಾಬಾದ್‌ನ (Munirabad) ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಕರ್ನಾಟಕ ಸರ್ಕಾರ, ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ತುಂಗಭದ್ರಾ ಜಲಾಶಯದ (TB Dam) ನೂತನ 33 ಸ್ಪಿಲ್‌ವೇ ಗೇಟ್‌ಗಳ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: Tungabhadra Dam | ಮೂರು ರಾಜ್ಯಗಳ ಸಿಎಂ ಸಮ್ಮುಖದಲ್ಲಿ 33 ಕ್ರೆಸ್ಟ್ ಗೇಟ್ ಲೋಕಾರ್ಪಣೆ
ರೈತರ ರಕ್ಷಣೆಗೆ ಒಮ್ಮತದ ತೀರ್ಮಾನ:
ರೈತ ಸಂಘಟನೆಗಳು ಹಾಗೂ ವೇದಿಕೆಯವರು ನೀಡಿರುವ ಅರ್ಜಿ ಮತ್ತು ಪ್ರತಿಪಾದನೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ನವಲಿ ಡ್ಯಾಂ ನಿರ್ಮಾಣ ಇರಬಹುದು ಅಥವಾ ಜಲಾಶಯದಲ್ಲಿ ಶೇಖರಣೆಯಾಗಿರುವ ಹೂಳನ್ನು ತೆಗೆದು ನೀರನ್ನು ಸಂರಕ್ಷಿಸುವ ವಿಚಾರವಾಗಿರಬಹುದು. ಇವೆಲ್ಲದರ ಬಗ್ಗೆ ಗಂಟೆಗಳ ಕಾಲ ಸುದೀರ್ಘವಾಗಿ ಹಾಗೂ ವ್ಯಾಪಕವಾಗಿ ಚರ್ಚೆ ನಡೆಸಲಾಗಿದೆ. ರೈತರ ಹಿತವನ್ನು ಕಾಯಲು ಮತ್ತು ಅವರ ರಕ್ಷಣೆ ಮಾಡಲು ನಾವೆಲ್ಲರೂ ಸೇರಿ ಒಮ್ಮತದ ಅಭಿಪ್ರಾಯಕ್ಕೆ ಬಂದಿದ್ದೇವೆ. ಈ ಸಭೆಯಲ್ಲಿ ಕೈಗೊಳ್ಳಲಾದ ಅಂತಿಮ ನಿರ್ಧಾರಗಳನ್ನು ಕೇಂದ್ರ ಸಚಿವರು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ತಿಳಿಸಿದರು.

ಜಲಸಂಪನ್ಮೂಲ ಇತಿಹಾಸದಲ್ಲಿ ಸುದೀರ್ಘ ಚರ್ಚೆ:
ಇಂದು ಜಲಸಂಪನ್ಮೂಲ ಇಲಾಖೆಯ ಇತಿಹಾಸದಲ್ಲೇ ಅತ್ಯಂತ ಪ್ರಮುಖವಾದ ದಿನವಾಗಿದೆ. ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನವನ್ನು ಎತ್ತಿಹಿಡಿಯಲು, ನಮ್ಮ ಹಕ್ಕುಗಳನ್ನು ರಕ್ಷಿಸಲು ಹಾಗೂ ರೈತರನ್ನು ಬದುಕಿಸಲು “ನಮ್ಮ ನೀರು ನಮ್ಮ ಹಕ್ಕು” ಎಂಬ ಘೋಷಣೆಯಡಿ ಮೂರು ರಾಜ್ಯಗಳ (ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ) ರೈತರ ಹಿತ ಕಾಯುವ ನಿಟ್ಟಿನಲ್ಲಿ ಈ ಐತಿಹಾಸಿಕ ತೀರ್ಮಾನಕ್ಕೆ ಬರಲಾಗಿದೆ.ಇದನ್ನೂ ಓದಿ: ರಾಜ್ಯದ ಪ್ರಮುಖ ಜಲಾಶಯಗಳು ಖಾಲಿ – ಯಾವ ಡ್ಯಾಂನಲ್ಲಿ ಎಷ್ಟು ನೀರಿದೆ?
“ನೇಗಿಲ ಕುಲದೊಳಗಡಗಿದೆ ಕರ್ಮ, ನೇಗಿಲ ಮೇಲೆಯೇ ನಿಂತಿದೆ ಧರ್ಮ”
ರೈತರ ಹಿತರಕ್ಷಣೆಯೇ ಪರಮೋಚ್ಚ ಧ್ಯೇಯ ಎಂದು ನಂಬಿರುವ ನಮ್ಮ ಸರ್ಕಾರ, ತುಂಗಭದ್ರಾ ಅಣೆಕಟ್ಟಿನ ಗೇಟ್ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿತ್ತು. ಯಾವುದೇ ವಿಳಂಬವಿಲ್ಲದೆ ಜಲಾಶಯಕ್ಕೆ ನೂತನ ಗೇಟ್‌ಗಳನ್ನು ಅಳವಡಿಸುವ ಕಾರ್ಯವನ್ನು… pic.twitter.com/RQjPbJ60RP
— DK Shivakumar (@DKShivakumar) June 25, 2026
ತುಂಗಭದ್ರಾ ಇತಿಹಾಸದ ಸ್ಮರಣೆ:
ತುಂಗಭದ್ರಾ ನದಿಗೆ ಜಲಾಶಯ ನಿರ್ಮಿಸುವ ಆಲೋಚನೆಗೆ 1860ರಲ್ಲೇ ಬ್ರಿಟಿಷ್ ಇಂಜಿನಿಯರ್ ಸರ್ ಆರ್ಥರ್ ಕಾಟನ್ ಅವರು ನಾಂದಿ ಹಾಡಿದ್ದರು. ತದನಂತರ 1949ರಲ್ಲಿ ಇದರ ಕಾಮಗಾರಿ ಆರಂಭಗೊಂಡು ಪೂರ್ಣಗೊಳ್ಳುವ ಹೊತ್ತಿಗೆ ಅನೇಕ ಮಹನೀಯರು ಇದಕ್ಕೆ ಸಾಕ್ಷಿಯಾಗಿದ್ದಾರೆ. ರಾಯಲಸೀಮೆ, ಬಳ್ಳಾರಿ ಭಾಗದ ಜನರ ಹಿತದೃಷ್ಟಿಯಿಂದ ಹಾಗೂ ಕಾಮಾಕ್ಷಿ ಪೀಠದ ಮಾರ್ಗದರ್ಶನದಂತೆ ಈ ಯೋಜನೆಯನ್ನು ಜಾರಿಗೊಳಿಸಬೇಕಾದ ಅನಿವಾರ್ಯತೆ ಇವತ್ತಿನದ್ದಾಗಿದೆ. ಮೂರು ರಾಜ್ಯಗಳ ನೀರಾವರಿ ಸಮಸ್ಯೆಗಳನ್ನು ಒಟ್ಟಾಗಿ ಹೇಗೆ ಬಗೆಹರಿಸಿ ರೈತರನ್ನು ಬದುಕಿಸಬೇಕು ಎನ್ನುವುದಕ್ಕೆ ಇವತ್ತಿನ ದಿನ ಸಾಕ್ಷಿಯಾಗಿದೆ ಎಂದರು.

ದೇವರು ನಮಗೆ ಎರಡು ಆಯ್ಕೆಗಳನ್ನು ನೀಡಿದ್ದಾನೆ. ಒಂದು ಕೊಟ್ಟು ಹೋಗುವುದು, ಇಲ್ಲವೇ ಬಿಟ್ಟು ಹೋಗುವುದು. ದೇವರು ಯಾರಿಗೂ ವರವನ್ನೂ ಕೊಡುವುದಿಲ್ಲ, ಶಾಪವನ್ನೂ ಕೊಡುವುದಿಲ್ಲ, ಕೇವಲ ಅವಕಾಶವನ್ನು ಮಾತ್ರ ನೀಡುತ್ತಾನೆ. ಈ ಬದುಕಿನಲ್ಲಿ ನಮ್ಮ ಹೆಜ್ಜೆಯ ಗುರುತುಗಳನ್ನು ಉಳಿಸಿ ಹೋಗಲು, ಸಾಕ್ಷಿ ಗುಡ್ಡಗಳನ್ನು ನಿರ್ಮಾಣ ಮಾಡಲು ಸಿಕ್ಕಿರುವ ಈ ಅವಕಾಶದಲ್ಲಿ ಜನಸಾಮಾನ್ಯರ ಹಾಗೂ ರೈತರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಭಾವುಕರಾಗಿ ನುಡಿದರು.ಇದನ್ನೂ ಓದಿ: ಇಂದು ಟಿಬಿ ಡ್ಯಾಂನ 33 ನೂತನ ಕ್ರಸ್ಟ್ ಗೇಟ್ ಲೋಕಾರ್ಪಣೆ
ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಜಂಟಿ ಸಹಯೋಗದೊಂದಿಗೆ ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಅಳವಡಿಸಿದ 33 ಸ್ಪಿಲ್‌ವೇ ಗೇಟುಗಳನ್ನು ಲೋಕಾರ್ಪಣೆ ಮಾಡಲಾಯಿತು. ನಂತರ ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿ, ಕೇಂದ್ರ ಜಲಶಕ್ತಿ ಸಚಿವರಾದ… pic.twitter.com/bVY97e6Vh5
— DK Shivakumar (@DKShivakumar) June 25, 2026
ಡ್ಯಾಂ ಸುರಕ್ಷತೆಗೆ ತ್ವರಿತ ಕ್ರಮ:
ಕಳೆದ ವರ್ಷ ಜಲಾಶಯದ 19ನೇ ಗೇಟ್ ಮುರಿದುಬಿದ್ದ ಸಂದರ್ಭವನ್ನು ನೆನೆದ ಮುಖ್ಯಮಂತ್ರಿಗಳು, ಅಂದು ಮಧ್ಯರಾತ್ರಿ ಜಿಲ್ಲಾ ಸಚಿವರಾದ ತಂಗಡಗಿ ಹಾಗೂ ಅಧಿಕಾರಿಗಳು ಫೋನ್ ಮಾಡಿ, ಡ್ಯಾಂ ಶೇಕ್ ಆಗುತ್ತಿರುವ ಪರಿಸ್ಥಿತಿಯನ್ನು ವಿವರಿಸಿದ್ದರು. ನಾನು ತಕ್ಷಣವೇ ಕಾರ್ಯಪ್ರವೃತ್ತನಾಗಿ ಬೆಳಗ್ಗೆ 6 ಗಂಟೆಗೆ ಹೆಲಿಕಾಪ್ಟರ್ ಮೂಲಕ ಹೊರಟು, 8:30ರ ಹೊತ್ತಿಗೆ ಡ್ಯಾಂ ಸ್ಥಳದಲ್ಲಿದ್ದೆ. ಕೇವಲ 10-15 ದಿನಗಳಲ್ಲಿ 19ನೇ ಗೇಟ್‌ನ್ನು ಯಶಸ್ವಿಯಾಗಿ ಬದಲಾಯಿಸುವ ಮೂಲಕ ಈ ಭಾಗದ ರೈತರ ಕಣ್ಣೀರನ್ನು ಒರೆಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಹೆಮ್ಮೆಯಿಂದ ಹೇಳಿದರು.

ದೇವರ ಆಶೀರ್ವಾದ ಮತ್ತು ರಾಜಕೀಯ ನಾಯಕರ ಒಗ್ಗಟ್ಟು:
ಗೇಟ್ ಮುರಿದಾಗ ವಿರೋಧ ಪಕ್ಷದವರು ಟೀಕೆ ಮಾಡಿದ್ದರು ಎಂದು ನೆನಪಿಸಿಕೊಂಡ ಅವರು, ಶಾರದಾ ದೇವಿ, ಹುಲಿಗೆಮ್ಮ ಹಾಗೂ ಹುಚ್ಚರಾಯಸ್ವಾಮಿಯ ಆಶೀರ್ವಾದ, ಹಂಪಿ ವಿರೂಪಾಕ್ಷನ ಕೃಪೆ ಮತ್ತು ರಾಘವೇಂದ್ರ ಸ್ವಾಮಿಯ ಶಕ್ತಿಯಿಂದ ಇಂತಹ ಮಹತ್ವದ ಕಾರ್ಯವನ್ನು ಮಾಡಲು ಸಾಧ್ಯವಾಯಿತು. ಅಲ್ಲದೆ, ಮೂರೂ ರಾಜ್ಯಗಳ ರೈತರ ಹಿತದೃಷ್ಟಿಯಿಂದ ಜಲಾಶಯದ ಎಲ್ಲಾ 33 ಗೇಟುಗಳನ್ನು ಬದಲಾಯಿಸುವ ದಿಟ್ಟ ತೀರ್ಮಾನವನ್ನು ಕೈಗೊಳ್ಳಲಾಯಿತು ಎಂದು ವಿವರಿಸಿದರು.ಇದನ್ನೂ ಓದಿ: ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆ ಆರೋಪ – 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್
ಇತಿಹಾಸ ಸೃಷ್ಟಿಸಿದ ಮೂವರು ಮುಖ್ಯಮಂತ್ರಿಗಳು:
ನಾವು ಇತಿಹಾಸವನ್ನು ಮರೆಯುವವರಲ್ಲ, ಇತಿಹಾಸವನ್ನು ಓದುವವರಲ್ಲ, ಬದಲಿಗೆ ಇತಿಹಾಸವನ್ನು ಸೃಷ್ಟಿಸುವವರು ಎಂದು ಘೋಷಿಸಿದ ಅವರು, ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ದಕ್ಷಿಣ ಭಾರತದ ಮೂವರು ಪ್ರಮುಖ ಮುಖ್ಯಮಂತ್ರಿಗಳಾದ ಚಂದ್ರಬಾಬು ನಾಯ್ಡು (ಆಂಧ್ರಪ್ರದೇಶ) ಮತ್ತು ರೇವಂತ್ ರೆಡ್ಡಿ (ತೆಲಂಗಾಣ) ಅವರೊಂದಿಗೆ ತಾವೂ ಸೇರಿ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು.

ಒಗ್ಗಟ್ಟಿನ ಮಂತ್ರ:
ಜೊತೆಗೂಡುವುದು ಆರಂಭ, ಜೊತೆಗೂಡಿ ಚರ್ಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂಬ ತತ್ವದಡಿ ಮೂರೂ ರಾಜ್ಯಗಳು ಒಟ್ಟಾಗಿ ಕೆಲಸ ಮಾಡುತ್ತಿವೆ. ಈ ಒಗ್ಗಟ್ಟಿನ ಮೂಲಕ 33 ಟಿಎಂಸಿ ನೀರನ್ನು ಉಳಿಸುವ ಹಾಗೂ ಮುಂದಿನ ದಿನಗಳಲ್ಲಿ ಡ್ಯಾಂ ಅನ್ನು ಸಂಪೂರ್ಣವಾಗಿ ರಕ್ಷಿಸುವ ಭರವಸೆಯನ್ನು ರೈತರಿಗೆ ನೀಡಿದರು. ತಾವು ಹಿಂದೆ ನೀರಾವರಿ ಸಚಿವರಾಗಿದ್ದಾಗ ಹಾಗೂ ಪ್ರಸ್ತುತ ಮುಖ್ಯಮಂತ್ರಿಯಾಗಿದ್ದರೂ ಸಹ, ಎಂದಿಗೂ ರೈತರ ಸೇವಕ ಮತ್ತು ಬಂಧುವಾಗಿ ಜವಾಬ್ದಾರಿಯಿಂದ ಕೆಲಸ ಮಾಡುವುದಾಗಿ ಈ ಸಂದರ್ಭದಲ್ಲಿ ಭರವಸೆ ನೀಡಿದರು.
ರೈತನಿಗೆ ಸಂಬಳವಿಲ್ಲ, ಪ್ರಮೋಷನ್ ಇಲ್ಲ, ಪೆನ್ಷನ್ ಇಲ್ಲ, ರಜೆಯೂ ಇಲ್ಲ ಹಾಗೂ ನಿವೃತ್ತಿಯೂ ಇಲ್ಲ. ಇಂತಹ ಕಷ್ಟದ ಪರಿಸ್ಥಿತಿಯಲ್ಲೂ ದೇಶಕ್ಕೆ ಅನ್ನ ನೀಡುವ ರೈತನ ಬದುಕನ್ನು ಉಳಿಸಬೇಕು ಮತ್ತು ಈ ಭಾಗದ ಭತ್ತದ ಕಣಜವನ್ನು ಕಾಪಾಡಬೇಕು ಎಂಬ ದೃಢ ತೀರ್ಮಾನವನ್ನು ನಿಮ್ಮೆಲ್ಲರ ಆಶೀರ್ವಾದದೊಂದಿಗೆ ನಾವು ತೆಗೆದುಕೊಂಡಿದ್ದೇವೆ ಎಂದು ನುಡಿದರು.ಇದನ್ನೂ ಓದಿ: ಡಾ.ಪ್ರದೀಪ್‌ಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ
