13ನೇ ಅಂತಾರಾಷ್ಟ್ರೀಯ ಚಿತ್ರೋತ್ಸವ ಹೊಸದೊಂದು ಪರಂಪರೆಗೆ ನಾಂದಿ ಹಾಡಿತು. ಮೈಸೂರಿನ ಸುತ್ತೂರು ಮಠದ ಸಾವಿರ ವರ್ಷಗಳ ಇತಿಹಾಸವನ್ನು ಕಟ್ಟಿಕೊಡುವ ‘ಸುತ್ತೂರು ಗುರು ಪರಂಪರೆ’ ಹೆಸರಿನ ಆನಿಮೇಷನ್ ಸಿನಿಮಾವನ್ನು ಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಯಿತು. ಈ ಪ್ರದರ್ಶನಕ್ಕೆ ಸುತ್ತೂರು ಮಠದ ಶಿವಮೂರ್ತಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಆಗಮಿಸಿದ್ದರು. ಇದೇ ಮೊದಲ ಬಾರಿಗೆ ಚಿತ್ರೋತ್ಸವದಲ್ಲಿ ಹೆಸರಾಂತ ಎರಡು ಮಠದ ಸ್ವಾಮಿಗಳು ಆಗಮಿಸಿದ್ದು ವಿಶೇಷ. ಇದನ್ನೂ ಓದಿ : ದೂರದರ್ಶನದಲ್ಲಿ ಸಿಗ್ತಾರೆ ದಿಯಾ ಹೀರೋ
Advertisement
ಈಗಾಗಲೇ ಈ ಆನಿಮೇಷನ್ ಸಿನಿಮಾ ಜಪಾನ್, ಅಮೆರಿಕಾ, ಇಟಲಿ ಸೇರಿದಂತೆ ಹಲವು ದೇಶಗಳಲ್ಲಿ ಪ್ರದರ್ಶನವಾಗಿದೆ. ಹಲವು ಬಹುಮಾನಗಳನ್ನೂ ಪಡೆದಿದೆ. ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕರ್ನಾಟಕದಲ್ಲಿ ಪ್ರದರ್ಶನವಾಗಿದ್ದು ವಿಶೇಷ. ಸಿನಿಮಾ ಪ್ರದರ್ಶನದ ನಂತರ ಮಾತನಾಡಿದ ಚಲನಚಿತ್ರ ಅಕಾಡಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ‘ಚಿತ್ರೋತ್ಸವದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಥದ್ದೊಂದು ವಿಸ್ಮಯ ನಡೆದಿದೆ. ಚಿತ್ರೋತ್ಸವಕ್ಕೆ ಈ ಮೂಲಕ ಹೊಸ ಆಯಾಮ ಸಿಕ್ಕಿದೆ. ಸಿನಿಮಾ ವೀಕ್ಷಿಸಿದ ಪ್ರತಿಯೊಬ್ಬರೂ ಪ್ರಂಶಸೆ ವ್ಯಕ್ತ ಪಡಿಸಿದ್ದಾರೆ” ಎಂದರು. ಇದನ್ನೂ ಓದಿ : ಡಾ.ರಾಜ್ ಹುಟ್ಟಿದ ಊರಲ್ಲಿ ಫಸ್ಟ್ ಟೈಮ್ ಸಿನಿಮಾ ಮುಹೂರ್ತ
Advertisement
Advertisement
ಪ್ರದರ್ಶನದ ವೇಳೆ ವಾಣಿಜ್ಯ ಮಂಡಳಿ ಅಧ್ಯಕ್ಷ ಕೆ.ಜೈರಾಜ್, ಜಾನಪದತಜ್ಞ ಗೊ.ರು.ಚನ್ನಬಸಪ್ಪ, ಆನಿಮೇಷನ್ ಚಿತ್ರ ನಿರ್ದೇಶಕ ಅಬ್ದುಲ್ ಕರೀಂ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.