ಹಾಸನ: ಅಪಘಾತದಲ್ಲಿ (Accident) ಗಾಯಗೊಂಡಿದ್ದ ತನ್ನ ಅಜ್ಜನನ್ನು ಆಂಬ್ಯುಲೆನ್ಸ್‌ಲ್ಲಿ ಕರೆದೊಯ್ಯುವುದನ್ನು ನೋಡುತ್ತಾ ನಿಂತಿದ್ದ ಬಾಲಕನಿಗೆ ಕಾರು (Car) ಡಿಕ್ಕಿಯಾದ ಘಟನೆ ಸಕಲೇಶಪುರದ (Sakleshpura) ಬಾಳೆಗದ್ದೆ ಗ್ರಾಮದ ಸಮೀಪ ನಡೆದಿದೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಭವಿಷ್ (16) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕ. ಭವಿಷ್‌ನ ಅಜ್ಜ ಸಿದ್ದರಾಜು ಅವರಿಗೆ ಬೈಕ್ ಡಿಕ್ಕಿಯಾಗಿ, ಗಾಯಗೊಂಡಿದ್ದರು. ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ತಾತನಿದ್ದ ಆಂಬ್ಯುಲೆನ್ಸ್ ಹೋಗುವುದನ್ನು ನೋಡುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿಯಾಗಿದೆ. ಅಪಘಾತದ ಬಳಿಕ ಚಾಲಕ ಕಾರನ್ನು ನಿಲ್ಲಿಸದೇ ಅಲ್ಲಿಂದ ತೆರಳಿದ್ದಾನೆ. ಇದನ್ನೂ ಓದಿ: ಫಾರ್ಮ್ ಹೌಸ್ ಗೇಟ್ ಬಳಿ ನಾಡಬಾಂಬ್ ಸ್ಫೋಟ – ವಕೀಲನ ಸ್ಥಿತಿ ಗಂಭೀರ
ಹಾಸನದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಭವಿಷ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ನನ್ನ ಮಗಳು ತಪ್ಪು ಮಾಡಿದ್ರೆ ಅದೇ ಕೋಟೆಯಿಂದ ತಳ್ಳಿ ಬಿಡಿ – ಸಿಯಾ ಪೋಷಕರ ಆಕ್ರೋಶ
