ನಾಗಪುರ: ನಾಗಪುರದಲ್ಲಿ ಮಹಾರಾಷ್ಟ್ರ (Maharashtra) ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ (Chandrashekhar Bawankule) ಪುತ್ರನ ಒಡೆತನದ ಆಡಿ ಕಾರು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಪುತ್ರ ಸಾಂಕೇತ್ ಬವಾಂಕುಲೆ ಸೇರಿದಂತೆ ಮೂವರು ಘಟನೆಯ ಬಳಿಕ ಪರಾರಿಯಾಗಿದ್ದಾರೆ. ಸೋಮವಾರ ಈ ಘಟನೆ ನಡೆದಿದ್ದು ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸ್ಫೋಟಕ್ಕೆ ಉಗ್ರರ ಸಂಚು – ಮಲ್ಲೇಶ್ವರ ಬಿಜೆಪಿ ಕಚೇರಿಗೆ ಪೊಲೀಸ್ ಭದ್ರತೆ ಹೆಚ್ಚಳ
ಈ ಘಟನೆ ಮಧ್ಯರಾತ್ರಿ ಸುಮಾರು 1 ಗಂಟೆಗೆ ನಡೆದಿದ್ದು, ಕಾರಿನಲ್ಲಿದ್ದವರು ಮದ್ಯಸೇವಿಸಿದ್ದರು ಎನ್ನಲಾಗಿದೆ. ಆಡಿ ಕಾರು ದೂರುದಾರ ಜಿತೇಂದ್ರ ಸೋಕಾಂಬ್ಲೆ ಕಾರಿಗೆ ಮೊದಲು ಢಿಕ್ಕಿ ಹೊಡೆದು, ನಂತರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರರಿಬ್ಬರಿಗೂ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಧರಂಪೇತ್‌ನ ಬಾರ್ ನಿಂದ ಹಿಂತಿರುಗುವ ವೇಳೆ ಈ ಘಟನೆ ಸಂಭವಿಸಿದ್ದು, ಬಂಧಿತರಿಬ್ಬರನ್ನು ಹೊರತು ಪಡಿಸಿ ಸಾಂಕೇತ್ ಬವಾಂಕುಲೆ ಸೇರಿದಂತೆ ಇನ್ನೂ ಮೂವರು ಕಾರಿನಲ್ಲಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು| ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ – ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ
ಆಡಿ ಕಾರು ಮಂಕಾಪುರದ ಕಡೆಗೆ ಚಲಿಸುತ್ತಿದ್ದ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಟಿ-ಪಾಯಿಂಟ್ ನಲ್ಲಿ ಪೋಲೋ ಕಾರಿಗೂ ಡಿಕ್ಕಿ ಹೊಡೆದಿದೆ. ಕಾರನ್ನು ಹಿಂಬಾಲಿಸಿ ಪೋಲೋ ಕಾರಿನ ಚಾಲಕ ಮಂಕಾಪುರದ ಸೇತುವೆಯ ಬಳಿ ಆಡಿ ಕಾರನ್ನು ನಿಲ್ಲಿಸಿದ್ದರು. ಸಂಕೇತ್ ಸೇರಿದಂತೆ ಮೂವರು ಪರಾರಿಯಾಗಿದ್ದಾರೆ.
ಘಟನೆಯ ಕುರಿತು ಚಂದ್ರಶೇಖರ್ ಬವಾಂಕುಲೆ ಸುದ್ದಿಗಾರರೊಂದಿಗೆ ಮಾತನಾಡಿ ಆಡಿ ಕಾರು ತನ್ನ ಮಗನ ಹೆಸರಿನಲ್ಲಿ ನೋದಣಿಯಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಪೊಲೀಸರು ಅಪಘಾತದ ಬಗ್ಗೆ ಯಾವುದೇ ಪಕ್ಷಪಾತ ಮಾಡದೇ ಸರಿಯಾದ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಹೇಳಿದರು. ಇದನ್ನೂ ಓದಿ: Valmiki Scam| ಬಹುಕೋಟಿ ಹಗರಣದ ಮಾಸ್ಟರ್ ಮೈಂಡ್ ನಾಗೇಂದ್ರ – ಇಡಿ ಚಾರ್ಜ್‌ಶೀಟ್ ಸಲ್ಲಿಕೆ